ಈದ್ಗಾ ಮೈದಾನ ವಿವಾದ; ಸುಪ್ರೀಂಕೋರ್ಟ್ ಜಡ್ಜ್ ಗಳ ನಡುವೆ ಭಿನ್ನ ಅಭಿಪ್ರಾಯದ ಹಿನ್ನೆಲೆ, ವಿಚಾರಣೆ ಸಿಜೆಐಗೆ ವರ್ಗಾವಣೆ; ವರದಿ

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್ ಆದೇಶಕ ತಡೆ ನೀಡಲು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಚಾಮರಾಜಪೇಟೆ ಈದ್ಗಾ ಮೈದಾನದ ಗಣೇಶೋತ್ಸವ ಆಚರಣೆ ವಿಚಾರ ಇಬ್ಬರು ನ್ಯಾಯಾಧೀಶರ ನಡುವೆ ವಿಭಿನ್ನ ಅಭಿಪ್ರಾಯಗಳು ಬಂದ ಕಾರಣ ಪ್ರಕರಣವನ್ನು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ವಹಿಸಲಾಗಿದೆ ಎಂದು ವರದಿಯಾಗಿದೆ.

ಗಣೇಶ ಚತುರ್ಥಿ ಆಚರಿಸಲು ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಮೊರೆ ಹೋಗಲಾಗಿತ್ತು.ನ್ಯಾಯಮೂರ್ತಿ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರು ಪ್ರಕರಣವನ್ನು ಸಿಜೆಐ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿದ್ದಾರೆ.ವಕ್ಫ್ ಬೋರ್ಡ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ.

ಟಾಪ್ ನ್ಯೂಸ್