ಕೇರಳ; ಪ್ರೊಫೆಸರ್ ಕೈ ಕತ್ತರಿಸಿದ ಪ್ರಕರಣ, ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಕೇರಳ;2010 ರಲ್ಲಿ ಇಡುಕ್ಕಿ ಜಿಲ್ಲೆಯ ತೊಡಪುಳದ ನ್ಯೂಮನ್ ಕಾಲೇಜಿನ ಪ್ರೊಫೆಸರ್ ಜಿ ಟಿ ಜೋಸೆಫ್ ಅವರ ಬಲಗೈಯನ್ನು ಕತ್ತರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಎನ್‌ಐಎ ವಿಶೇಷ ನ್ಯಾಯಾಲಯವು ಆರು ಅಪರಾಧಿಗಳ ಪೈಕಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಅಪರಾಧಿಗಳೆಂದು ಸಾಬೀತಾದ ಸಾಜಿಲ್ ನಜರ್ ಮತ್ತು ನಜೀಬ್ ಎನ್ನುವವರಿಗೆ ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಸ್ ಭಾಸ್ಕರ್ ಈ ಶಿಕ್ಷೆ ವಿಧಿಸಿದ್ದಾರೆ.

ಕಾನೂನು ಬಾಹಿರ ಚಟುವಟಿಕೆ ನಿಷೇಧ ಕಾಯ್ದೆ ಭಾರತೀಯ ದಂಡ ಸಂಹಿತೆ ಮತ್ತು ಸ್ಪೋಟಕ ವಸ್ತುಗಳ ಕಾಯ್ದೆ ಅನ್ವಯ ತಪ್ಪಿತಸ್ಥರನ್ನು ಎರಡನೇ ಹಂತದ ತನಿಖೆಯಲ್ಲಿ ಢಪಟ್ಟಿದೆ ಎಂದೂ ಬುಧವಾರ ಎನ್‌ಐಎ ಕೋರ್ಟ್ ತೀರ್ಪು ನೀಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಅಪರಾಧಿಗಳ ಪೈಕಿ ಈಗ ಮೂವರಿಗೆ ಎನ್ ಐ ಎ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದೆ.

ಟಾಪ್ ನ್ಯೂಸ್