ನಿಂತಿದ್ದ ಬಸ್ ಗಳಿಗೆ ಟ್ರಕ್ ಢಿಕ್ಕಿ ಹೊಡೆದು ಭೀಕರ ಅಪಘಾತ;14 ಮಂದಿ ದುರ್ಮರಣ,ಹಲವರ ಸ್ಥಿತಿ ಗಂಭೀರ

ಮಧ್ಯಪ್ರದೇಶ:ಮೊಹಾನಿಯಾ ಸುರಂಗದ ಬಳಿ ಟ್ರಕ್​ವೊಂದು ನಿಂತಿದ್ದ ಬಸ್​ಗಳಿಗೆ ಡಿಕ್ಕಿ ಹೊಡೆದ ಪರಿಣಾಮ, 14 ಜನರು ಮೃತಪಟ್ಟು,50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಗೃಹ ಸಚಿವ ಅಮಿತ್ ಶಾ ಅವರ ರ್‍ಯಾಲಿಗೆ ತೆರಳಿದ್ದ ಬಸ್ ನ್ನು ಚಾಲಕರು ಸುರಂಗ ಮಾರ್ಗದ ಬಳಿ ನಿಲ್ಲಿಸಿದ್ದಾರೆ. ಆಗ ಎದುರಗಡೆಯಿಂದ ವೇಗವಾಗಿ ಬರುತ್ತಿದ್ದ ಟ್ರಕ್​ವೊಂದು ಬಸ್ ಗಳಿಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಒಂದು ಬಸ್​ ಪಲ್ಟಿಯಾಗಿದ್ದು, ಉಳಿದ ಬಸ್​ಗಳು ಡಿಕ್ಕಿಯಾದ ರಭಸಕ್ಕೆ ಜಖಂಗೊಂಡಿದ್ದವು.

ಅಪಘಾತದಲ್ಲಿ 14 ಜನ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಘಟನೆ ಬಗ್ಗೆ ಸಂತಾಪ ಸೂಚಿಸಿದ ಸಿಎಂ ಶಿವರಾಜ್ ಸಿಂಗ್,
ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಹಾಗೂ ಸಾಮಾನ್ಯ ಗಾಯಾಳುಗಳಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.ಇದಲ್ಲದೆ ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಉದ್ಯೋಗ ನೀಡುವುದಾಗಿ ಸಿಎಂ ಶಿವರಾಜ್ ಸಿಂಗ್ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com