ಪುತ್ತೂರು; ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತನೆ, ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು;ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರಿನ ಕಲ್ಲಿಮಾರು ಎಂಬಲ್ಲಿ ನಡೆದಿದೆ.

ಕಡಬ ನಿವಾಸಿ ಪ್ರವೀಣ್ ಯಾನೆ ಸೀತಾರಾಮ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯರಿಬ್ಬರು ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದಾಗ ಪ್ರವೀಣ್ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದ್ದು, ಆತನಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದು ಕಾಲೇಜಿನ ಉಪನ್ಯಾಸಕಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಉಪನ್ಯಾಸಕಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸರು ಆರೋಪಿ ಪ್ರವೀಣ್ ನನ್ನು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್