ಪ್ರೇಮ ವಿವಾಹಕ್ಕೆ ಕುಟುಂಬಸ್ಥರ ವಿರೋಧ; ಯುವ ಜೋಡಿ ಆತ್ಮಹತ್ಯೆ

ಪ್ರೇಮ ವಿವಾಹಕ್ಕೆ ಕುಟುಂಬಸ್ಥರು ನಿರಾಕರಿಸಿದ ಕಾರಣ ಮನನೊಂದ ಯುವ ಜೋಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರನಗರದಲ್ಲಿ ನಡೆದಿದೆ.

ಪಂಕಜ್ (23) ಮತ್ತು ಶಿವಾನಿ (20)ಆತ್ಮಹತ್ಯೆ ಮಾಡಿಕೊಂಡವರು.

ಇಬ್ಬರು ಕೂಡ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು.ಆದರೆ ಶಿವಾನಿ ಮನೆಯವರು ಮದುವೆ ಕುರಿತು ವಿರೋಧವನ್ನು ವ್ಯಕ್ತಪಡಿಸಿದ್ದಾರೆ.ಇದರಿಂದ ಮನನೊಂದ ಪಂಕಜ್ ಮತ್ತು ಶಿವಾನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

ಪೊಲೀಸ್ ಅಧಿಕಾರಿ ವಿನಯ್ ಕುಮಾರ್ ಗೌತಮ್ ಈ ಕುರಿತು ಮಾಹಿತಿ ನೀಡಿದ್ದು,ವಿಷಕಾರಿ ಪದಾರ್ಥಗಳನ್ನು ಸೇವಿಸಿದ್ದ ಜೋಡಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com