ಬಂಟ್ವಾಳ; ಗ್ರಾಮ ಪಂಚಾಯತ್ ಉಪಚುನಾವಣೆ ಫಲಿತಾಂಶ ಪ್ರಕಟ, ಅನಂತಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು, ನೆಟ್ಲ ಮುಡ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು

ಬಂಟ್ವಾಳ; ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನ ತಲಾ ಒಂದು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಅನಂತಾಡಿ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಶಿಕಲಾ ಹಾಗೂ ನೆಟ್ಲ ಮುಡ್ನೂರು ಪಂಚಾಯತ್ ನ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಜಾತ ಗೆಲುವು ಸಾಧಿಸಿದ್ದಾರೆ.

ಅನಂತಾಡಿ ಗ್ರಾಮ ಪಂಚಾಯತ್ ನಲ್ಲಿ ಮತದಾರರ ಪೈಕಿ 500 ಮಂದಿ ಮತ ಚಲಾಯಿಸಿದ್ದರು.ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿಕಲಾ 254 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.ಗೀತಾ ಚಂದ್ರ ಶೇಖರ್ (ಬಿಜೆಪಿ) 242 ಮತಗಳನ್ನು ಪಡೆದಿದ್ದಾರೆ.

ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ 596 ಮಂದಿ ಮತ ಚಲಾಯಿಸಿದ್ದರು. ಈ ಪೈಕಿ ಬಿಜೆಪಿಯ ಸುಜಾತ ಜಗದೀಶ ಪೂಜಾರಿ 353 ಮತ ಪಡೆದು ಗೆಲುವು ಸಾಧಿಸಿದ್ದಾರೆ.ಕಾಂಗ್ರೆಸ್ ನ ಹರಿಣಾಕ್ಷಿ 239 ಮತಗಳನ್ನು ಪಡೆದಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com