ಬೀಚ್ ನಲ್ಲಿ ಪ್ರವಾಸಿಗಳ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಸ್ಥಳೀಯ ನಿವಾಸಿಗಳು, ಓರ್ವ ಗಂಭೀರ

ಬೀಚ್ ನಲ್ಲಿ ಪ್ರವಾಸಿಗಳ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಸ್ಥಳೀಯ ನಿವಾಸಿಗಳು, ಓರ್ವ ಗಂಭೀರ

ಬೆಂಗಳೂರು:ಈ ತಿಂಗಳ ಆರಂಭದಲ್ಲಿ ಗೋವಾಕ್ಕೆ ಭೇಟಿ ನೀಡಿದ್ದ ದೆಹಲಿಯ ಕುಟುಂಬವೊಂದರ ಮೇಲೆ ಅಂಜುನಾ ಪ್ರದೇಶದಲ್ಲಿ ಸ್ಥಳೀಯರು ಕತ್ತಿಗಳು ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನೆಗೆ ಸಂಬಂಧಿಸಿ ಗೋವಾ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಕೊಲೆ ಯತ್ನ ಆರೋಪ ಹೊರಿಸಲಾಗಿದೆ. ದಾಳಿಕೋರರ ಬಗ್ಗೆ ಪೊಲೀಸರು ಮೃದು ಧೋರಣೆ ತೋರಿದ್ದಾರೆ ಎಂದು ಸಂತ್ರಸ್ತರಿಂದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತನಿಖಾಧಿಕಾರಿ ವಿರುದ್ಧ ಪ್ರಾಥಮಿಕ ತನಿಖೆಗೆ ಆದೇಶಿಸಲಾಗಿದೆ.

ದೆಹಲಿ ನಿವಾಸಿ 47 ವರ್ಷದ ಅಶ್ವಿನಿ ಕುಮಾರ್ ಚಂದ್ರಾನಿ ಎಂಬುವವರ ಮೇಲೆ ಮಾರ್ಚ್ 5 ರಂದು ಸಂಜೆ 5 ಗಂಟೆ ಸುಮಾರಿಗೆ ಅಂಜುನ ನಿವಾಸಿಗಳು ಹಲ್ಲೆ ನಡೆಸಿದ್ದರು. ರೋಷನ್ ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ತನಿಖೆಯ ಸಂದರ್ಭದಲ್ಲಿ, ದೇಹದ ಪ್ರಮುಖ ಭಾಗಗಳ ಮೇಲೆ ಚಾಕು ಮತ್ತು ಇತರ ಆಯುಧಗಳಿಂದ ಹಲ್ಲೆ ನಡೆಸಿರುವುದನ್ನು ಅವರು ಕಂಡುಕೊಂಡರು. ಆದ್ದರಿಂದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರಡಿ ದೂರು ದಾಖಲಿಸಲಾಗಿದೆ ಅಂಜುನಾ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com