ಮಂಗಳೂರು:ಪಿಕ್-ಅಪ್ ವಾಹನದಲ್ಲಿ ಸಾಗಿಸುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ
ನಂತೂರು ಜಂಕ್ಷನ್‌ನಲ್ಲಿ ನಡೆದಿದೆ.
ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ ಪಿಕ್-ಅಪ್ ಹಾಗೂ ಕಾರು ಕೆಪಿಟಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದವು.ನಂತೂರು ಜಂಕ್ಷನ್‌ನಲ್ಲಿ ಕಾರು ಚಾಲಕ ಬ್ರೇಕ್ ಹಾಕಿದಾಗ ಪಿಕ್‌ಅಪ್‌ನಲ್ಲಿದ್ದ ಪಟ್ಟಿಗಳು ಕಾರಿನ ಹಿಂಭಾಗದಿಂದ ಒಳಗೆ ಹೊಕ್ಕಿವೆ.
ಕಾರಿನಲ್ಲಿ ಚಾಲಕ ಮಾತ್ರವಿದ್ದರು. ಪಟ್ಟಿಗಳು ಹಿಂಭಾಗದ ಸೀಟುಗಳನ್ನು ದಾಟಿ ಬಂದು ಚಾಲಕನ ಸೀಟಿಗೆ ತಾಗಿ ನಿಂತುಕೊಂಡಿದೆ. ಕಾರು ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾರೆ.