ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಘಟನೆ ಚಿಕ್ಕಬಳ್ಳಾಪುರದ ಎಂ.ಜಿ.ರಸ್ತೆ ನಿವಾಸದಲ್ಲಿ ನಡೆದಿದೆ.
ಪೊಲೀಸ್ ಠಾಣೆಯ ಹಿಂಭಾಗವೇ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.
ಘಟನೆಯಲ್ಲಿ ಓರ್ವ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ತೀವ್ರತೆಗೆ ಮನೆಯ ಶೀಟ್ ಛಾವಣಿ,ಗೋಡೆ ಛಿದ್ರ ಛಿದ್ರವಾಗಿದೆ. ಸ್ಥಳದಲ್ಲಿ ಬೀಡುಬಿಟ್ಟಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.