ಬೆಂಗಳೂರು;ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯೊಂದು ಮತ್ತೆ ವಿವಾದಕ್ಕೆ ಕಾರಣವಾಗಿದೆ.
ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ 19 ಲಸಿಕೆ ಹಾಕಿಸಿಕೊಳ್ಳಬೇಡಿ ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು.ಆದರೆ ಅವರೇ ಅದನ್ನು ರಹಸ್ಯವಾಗಿ ತೆಗೆದುಕೊಂಡರು ಎಂದು ನಳಿನ್ ಕುಮಾರ್ ಹೇಳಿದ್ದಾರೆ.
ಮತ್ತೆ ಮಾತು ಮುಂದುವರಿಸಿದ ಕಟೀಲ್, ನಮ್ಮ ಎಂಎಲ್‌ಸಿ ಮಂಜುನಾಥ್ ಅವರು ಹೇಳಿದರು, ಲಸಿಕೆ ತೆಗೆದುಕೊಂಡಿದ್ದರಿಂದ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ. ಏಕೆಂದರೆ ಅವರಿಗೆ ಮಕ್ಕಳಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.