ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಮೃತ್ಯು

ಕೊಡಗು; ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರಿನಲ್ಲಿ ನಡೆದಿದೆ.

12 ವರ್ಷದ ಬಾಲಕ ಕೀರ್ತನ್​ ಮೃತ ವಿದ್ಯಾರ್ಥಿಯಾಗಿದ್ದಾನೆ. ನಿನ್ನೆ ರಾತ್ರಿ ಮನೆಯಲ್ಲಿದ್ದ ವೇಳೆ ಬಾಲಕ ಕಿರುಚಿಕೊಂಡಿದ್ದು, ಆತಂಕಗೊಂಡ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ನಡುವೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ.

ಇನ್ನು ಮಗನನ್ನು ಕಳೆದುಕೊಂಡ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.

ಟಾಪ್ ನ್ಯೂಸ್