BREAKING ಖ್ಯಾತ ಫ್ಯಾಷನ್ ಡಿಸೈನರ್ ಶವವಾಗಿ ಪತ್ತೆ
ಹೈದರಾಬಾದ್: ಖ್ಯಾತ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ತೆಲಂಗಾಣದ ಬಂಜಾರಾ ಹಿಲ್ಸ್ ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಎಎನ್ ಐ ವರದಿ ಮಾಡಿದೆ. ಪೊಲೀಸರು ಆಕೆಯ ಮಲಗುವ ಕೋಣೆಯಿಂದ ಕಾರ್ಬನ್ ಮಾನಾಕ್ಸೈಡ್ ಸಿಲಿಂಡರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಅನುಮಾನಾಸ್ಪದ ಸಾವಿನ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬುದಾಗಿ ಸರ್ಕಲ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.