ಈ ಬಾರಿ ಗೆಲುವು ಸಾಧಿಸಿದ ಮುಸ್ಲಿಮ್ ಶಾಸಕರ ವಿವರ ಇಲ್ಲಿದೆ…

ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ 136 ಕ್ಷೇತ್ರಗಳಲ್ಲಿ ಜಯಗಳಿಸಿ ಸ್ಪಷ್ಟ ಬಹುಮತವನ್ನು ಪಡೆದಿದೆ. ಈ ಬಾರಿ ರಾಜ್ಯದಲ್ಲಿ ಒಟ್ಟು 14 ಮಂದಿ ಮುಸ್ಲಿಮ್ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು‌. ಅದರಲ್ಲಿ 9 ಮಂದಿ ಜಯಗಳಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ. ಕಲಬುರಗಿ ಉತ್ತರ ಕ್ಷೇತ್ರದಿಂದ ಶಾಸಕಿ ಕನೀಝ್ ಫಾತಿಮಾ,ಬೆಳಗಾವಿ ಉತ್ತರದಿಂದ ಆಸೀಫ್ ಸೇಠ್, , ಬೀದರ್ ತ್ರದಿಂದ ರಹೀಮ್ ಖಾನ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕ ರಿಝ್ವಾನ್ ಅರ್ಷದ್, ಶಾಂತಿನಗರದಿಂದ ಶಾಸಕ ಎನ್.ಎ ಹ್ಯಾರಿಸ್, ಚಾಮರಾಜಪೇಟೆ ಕ್ಷೇತ್ರದಿಂದ … Read more

ಸತತ 6 ಬಾರಿ ಗೆಲುವು ಕಂಡಿದ್ದ ಶೆಟ್ಟರ್ ಈ ಬಾರಿಯ ಸೋಲಿನ ಬಗ್ಗೆ ಹೇಳಿದ್ದೇನು?

ಹುಬ್ಬಳ್ಳಿ;ಬಿಜೆಪಿಯಿಂದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಕಾಂಗ್ರೆಸ್‌ ಪಕ್ಷ ಸೇರಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನಿಂದ ಸ್ಪರ್ಧಿಸಿದ್ದ ಜಗದೀಶ್‌ ಶೆಟ್ಟರ್‌ ಸೋಲನ್ನು ಕಂಡಿದ್ದಾರೆ‌. ಈ ಕುರಿತು ಮಾತಾಡಿರುವ ಶೆಟ್ಟರ್‌, ಜನರ ತೀರ್ಮಾನವನ್ನ ಗೌರವಿಸುತ್ತೇನೆ. ನನ್ನನ್ನ ಸೋಲಿಸಬೇಕೆಂದು ಹಲವರು ಹಠ ತೊಟ್ಟಿದ್ದರು.ಅವರ ಆಸೆ ಈಡೇರಿದೆ. ಸೋತಿದ್ದಕ್ಕೆ ದುಃಖ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವ್ರು, ನನಗೆ ಪೆಟ್ಟು ಕೊಡಲು ಹೋಗಿ ಬಿಜೆಪಿಗೆ ಪೆಟ್ಟು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿಯಿಂದ ಟಿಕೆಟ್ ನೀಡದ ಕಾರಣಕ್ಕೆ ಕಾಂಗ್ರೆಸ್ ಸೇರಿ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ … Read more

ಈ ಬಾರಿ ಚುನಾವಣೆಯಲ್ಲಿ ಸೋತ ಪ್ರಮುಖರ ವಿವರ ಇಲ್ಲಿದೆ..

ಬೆಂಗಳೂರು:ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದ್ದು ಸರಕಾರ ರಚನೆಗೆ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.ಈ ಬಾರಿ ಎಲ್ಲಾ ಪಕ್ಷದಲ್ಲೂ ಕೆಲವು ಘಟಾನುಘಟಿ ನಾಯಕರುಗಳಿಗೆ ಮತದಾರರು ಸೋಲಿನ ರುಚಿ ತೋರಿಸಿದ್ದಾರೆ. ಇದರಲ್ಲೂ ಸಿಎಂ ಬೊಮ್ಮಾಯಿ ಸಚಿವ ಸಂಪುಟದ ಅನೇಕ 11 ಮಂದಿ ಸಚಿವರು ಪರಜಯವಾಗಿದ್ದಾರೆ. ಸೋತ ಪ್ರಮುಖ ರಾಜಕೀಯ ನಾಯಕರು ಸಚಿವ ಶ್ರೀರಾಮುಲು,ಬಿಜೆಪಿ ರಾಷ್ಟ್ರೀಯ ನಾಯಕ ಸಿ.ಟಿ ರವಿ,ಸಚಿವ ಬಿಸಿ ಪಾಟೀಲ್‌,ಸಚಿವ ವಿ. ಸೋಮಣ್ಣ, ಸಚಿವ ಮುರುಗೇಶ್‌ … Read more

ಕಾಂಗ್ರೆಸ್ ಗೆಲುವಿನ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿ ಹೇಳಿದ್ದೇನು?

ಹೊಸದಿಲ್ಲಿ:ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದು ಸರಕಾರ ರಚನೆಗೆ ಮುಂದಾಗಿದೆ. ಕಾಂಗ್ರೆಸ್ ನ ಈ ಅಭೂತಪೂರ್ವ ಗೆಲುವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನಿ ರಾಜ್ಯದಲ್ಲಿ ಚುನಾವಣೆ ಪ್ರಚಾರದ ವೇಳೆ ಅಂದಾಜು 20 ಬಾರಿ ರಾಜ್ಯಕ್ಕೆ ಬಂದು ಭರ್ಜರಿ ಚುನಾವಣೆ ಪ್ರಚಾರ ನಡೆಸಿದ್ದರು.ಆದರೆ ಫಲಿಸದೆ ಬಿಜೆಪಿ 65 ಕ್ಷೇತ್ರಗಳಿಗೆ ತೃಪ್ತಿ ಪಡೆದುಕೊಂಡಿದೆ.ರಾಜ್ಯ ಬಿಜೆಪಿ ತಮ್ಮ ಸೋಲನ್ನು ಒಪ್ಪಿಕೊಂಡಿದೆ. ಇನ್ನು ಕಾಂಗ್ರೆಸ್ ಗೆಲುವಿನ ಬಗ್ಗೆ … Read more

ಬಿಜೆಪಿಯ ಭದ್ರಕೋಟೆಯಾಗಿಯೇ ಉಳಿದುಕೊಂಡ ಕರಾವಳಿ; ಉಡುಪಿ& ದಕ್ಷಿಣ ಕನ್ನಡದಲ್ಲಿ ಗೆಲುವು ಕಂಡ ಎಲ್ಲಾ ಅಭ್ಯರ್ಥಿಗಳ ವಿವರ ಇಲ್ಲಿದೆ…

ಬೆಂಗಳೂರು; ರಾಜ್ಯ ವಿಧಾನ ಸಭಾ ಚುನಾವಣಾ ಫಲಿತಾಂಶದಲ್ಲಿ ಕರಾವಳಿ ಬಿಜೆಪಿ ಭದ್ರಕೋಟೆಯಾಗಿಯೇ ಉಳಿದು ಕೊಂಡಿದೆ. ಬಿಜೆಪಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವನ್ನು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯಶ್‌ಪಾಲ್ ಸುವರ್ಣ ಕಾಂಗ್ರೆಸ್​ನ ಪ್ರಸಾದ್​ ಕಾಂಚನ್​ ಹಾಗೂ ಜೆಡಿಎಸ್​ನ ದಕ್ಷತ್​ ಆರ್​ ಶೆಟ್ಟಿ ವಿರುದ್ಧ 32,776 ಸಾವಿರ ಮತಗಳ ಅಂತರದಲ್ಲಿ ಗೆಲ್ಲುವ ಮೂಲಕ ಗೆಲುವಿನ ನಗೆ ಬೀರಿದ್ಧಾರೆ. ಕಾರ್ಕಳ ವಿಧಾನಸಭಾ … Read more

ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ ಅಂಗಡಿಗಳು ತೆರೆದಿವೆ-ಕಾಂಗ್ರೆಸ್ ಗೆಲುವಿನ ಬಗ್ಗೆ ರಾಹುಲ್ ಗಾಂಧಿ ಏನೆಲ್ಲಾ ಹೇಳಿದ್ರು?

ಬೆಂಗಳೂರು;ಕರ್ನಾಟಕ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ ಅಂಗಡಿಗಳು ತೆರೆದಿವೆ ಎಂದು ಹೇಳಿದ್ದಾರೆ. ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ,ನಾನು ಮೊದಲು ಕರ್ನಾಟಕದ ಜನತೆಗೆ, ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ. ಕನಕ ನಾವು ಕರ್ನಾಟಕದಲ್ಲಿ ದ್ವೇಷದಿಂದ ಹೋರಾಡಿಲ್ಲ, ಹೃದಯದಿಂದ ಹೋರಾಡಿದ್ದೇವೆ. ದ್ವೇಷದ ಮುಂದೆ ಪ್ರೀತಿ ಗೆಲ್ಲುತ್ತದೆ, ಗೆದ್ದಿದೆ ಎಂದು ಹೇಳಿದ್ದಾರೆ. ನಾವು ಬಡವರ ಜತೆ ನಿಂತಿದ್ದೆವು. … Read more

ಬೊಮ್ಮಯಿಗೆ ಕಚೇರಿಗೆ ಹೋಗುವಾಗ ಅಡ್ಡ ಬಂದ ನಾಗರ ಹಾವು, ಅಚ್ಚರಿ ಘಟನೆ; ಬಿಜೆಪಿಯ ಹೀನಾಯ ಸೋಲಿನ ಬಗ್ಗೆ ಪ್ರತಿಕ್ರಿಯಿಸಿ ಬೊಮ್ಮಯಿ ಹೇಳಿದ್ದೇನು ಗೊತ್ತಾ?

ಬೆಂಗಳೂರು; ಕರ್ನಾಟಕದಲ್ಲಿ ಬಿಜೆಪಿಯ ಹೀನಾಯ ಸೋಲಿನ ಮೂಲಕ ಬಸವರಾಜ ಬೊಮ್ಮಯಿಯ ಆಡಳಿತ ಅಂತ್ಯಗೊಂಡಿದೆ. ಸಂಜೆಯೇ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಲಿದ್ದಾರೆ. ಹಾವೇರಿಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿವರು ಸಿಎಂ ಆಗಿರುವ ಹಿನ್ನಲೆಯಲ್ಲಿ, ನಾನೇ ಸೋಲಿನ ಹೊಣೆ ಹೊರುವುದಾಗಿ ಹೇಳಿದ್ದಾರೆ. ಇದೇ ವೇಳೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಸೋಲಿನ ಬಗ್ಗೆ ವಿಮರ್ಶೆ ಮಾಡುತ್ತೆವೆ ಎಂದು ಹೇಳಿದ್ದಾರೆ. ಶಿಗ್ಗಾಂವಿ ಬಿಜೆಪಿ ಶಿಬಿರ ಕಚೇರಿಗೆ ಬೊಮ್ಮಯಿ … Read more

ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವು; ಭಾವುಕರಾಗಿ ಕಣ್ಣೀರು ಹಾಕಿದ ಡಿಕೆ ಶಿವಕುಮಾರ್, ಗೆಲುವಿನ ಬಳಿಕ ಸಿದ್ದರಾಮಯ್ಯ ಮತ್ತು ಡಿಕೆಶಿ ಹೇಳಿದ್ದೇನು ಗೊತ್ತಾ?

ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಮುಂದುವರಿದಿದೆ, ಕಾಂಗ್ರೆಸ್​​ಗೆ ಭರ್ಜರಿ ಗೆಲುವು ದೊರೆಯುವುದು ಖಚಿತವಾಗಿದೆ. ಕನಕಪುರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆಲುವು ಸಾಧಿಸಿದ್ದು, ಭಾವುಕರಾಗಿ ಕಣ್ಣೀರು ಹಾಕಿದ್ದಾರೆ‌ ಕರ್ನಾಟಕದ ಅತಿದೊಡ್ಡ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರಿಗೆ ಮತ್ತು ವರಿಷ್ಠರಿಗೆ ಧನ್ಯವಾದಗಳು ಎಂದು ಅವರು ಹೇಳಿದರು.ಇದರ ಜೊತೆ ಸೋನಿಯಾ ಗಾಂಧೀ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭಾವುಕರಾಗಿ ಧನ್ಯವಾದ ಹೇಳಿದ್ದಾರೆ. ಸಿದ್ದರಾಮಯ್ಯ ಗೆಲುವಿನ ಬಳಿಕ ಪ್ರತಿಕ್ರಿಯೆ … Read more

ಉಡುಪಿಯ ಐದು ಕ್ಷೇತ್ರಗಳು ಬಿಜೆಪಿ ಪಾಲು, ಯಶ್ ಪಾಲ್ ಸುವರ್ಣಗೆ ಗೆಲುವು

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಅಂತಿಮ ಗಟ್ಟೆಕ್ಕೆ ತಲುಪಿದೆ.ಉಡುಪಿಯ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವಾಗಿದೆ. ಉಡುಪಿ ಕ್ಷೇತ್ರದಲ್ಲಿ ಬಿಜೆಪಿಯ ಯಶ್ಪಾಲ್ ಸುವರ್ಣಗೆ ಗೆಲುವಾಗಿದೆ. ಪುತ್ತೂರಿನಲ್ಲಿ ಅಶೋಕ್ ಕುಮಾರ್ ರೈ ಗೆಲುವಿನ ನಗೆ ಬೀರಿದ್ದು, ಭಾರೀ ಪೈಪೋಟಿ ನೀಡಿದ ಅರುಣ್ ಕುಮಾರ್ ಪುತ್ತಿಲಗೆ ಸೋಲಾಗಿದೆ. ಮಂಗಳೂರು ಉತ್ತರದಲ್ಲಿ ಇನಾಯತ್ ಅಲಿಗೆ ಸೋಲಾಗಿದ್ದು, ಭರತ್ ಶೆಟ್ಟಿ ಗೆಲುವನ್ನು ಕಂಡುಕೊಂಡಿದ್ದಾರೆ. 134 ಕ್ಷೇತ್ರಗಳಲ್ಲಿ ಮುನ್ನಡೆ ಮೂಲಕ ಕಾಂಗ್ರೆಸ್ ಬಹುಮತದತ್ತ ಸಾಗಿದೆ.ಅದೇ ರೀತಿ ಬಿಜೆಪಿ 65 ಕ್ಷೇತ್ರಗಳಲ್ಲಿ, ಜೆಡಿಎಸ್ 21 ಕ್ಷೇತ್ರಗಳಲ್ಲಿ … Read more

ಪುತ್ತೂರಿನಲ್ಲಿ ಅಶೋಕ್ ಕುಮಾರ್ ರೈಗೆ ಗೆಲುವು, ಪಕ್ಷೇತರ ಅಭ್ಯರ್ಥಿ ಪುತ್ತಿಲಗೆ ಸೋಲು

ಬೆಂಗಳೂರು;ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಸ್ಪಷ್ಟ ಚಿತ್ರಣದ ಹಾದಿಯಲ್ಲಿದೆ.ಕಾಂಗ್ರೆಸ್ ಬಹುಮತದತ್ತ ಸಾಗಿದೆ.ಪುತ್ತೂರಿನಲ್ಲಿ ಅಶೋಕ್ ಕುಮಾರ್ ರೈ ಗೆಲುವಿನ ನಗೆ ಬೀರಿದ್ದು, ಭಾರೀ ಪೈಪೋಟಿ ನೀಡಿದ ಅರುಣ್ ಕುಮಾರ್ ಪುತ್ತಿಲಗೆ ಸೋಲಾಗಿದೆ. ಮಂಗಳೂರು ಉತ್ತರದಲ್ಲಿ ಇನಾಯತ್ ಅಲಿಗೆ ಸೋಲಾಗಿದ್ದು, ಭರತ್ ಶೆಟ್ಟಿ ಗೆಲುವನ್ನು ಕಂಡುಕೊಂಡಿದ್ದಾರೆ. 131 ಕ್ಷೇತ್ರಗಳಲ್ಲಿ ಮುನ್ನಡೆ ಮೂಲಕ ಕಾಂಗ್ರೆಸ್ ಬಹುಮತದತ್ತ ಸಾಗಿದೆ.ಅದೇ ರೀತಿ ಬಿಜೆಪಿ 66 ಕ್ಷೇತ್ರಗಳಲ್ಲಿ, ಜೆಡಿಎಸ್ 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ … Read more