ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಕಾಸರಗೋಡಿನಲ್ಲಿ ಬಂಧನ; ಕರಾವಳಿಯ ಠಾಣೆಗಳಲ್ಲೂ ಇವರ ಮೇಲಿದೆ ಪ್ರಕರಣ!

ಕಾಸರಗೋಡು;ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ರಿವಾಲ್ವರ್ ಸಹಿತ ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೀಯಪದವಿನ ಅಬ್ದುಲ್ ರಹೀಮ್(36) ಮತ್ತು ಬಂದ್ಯೋಡು ಅಡ್ಕದ ಅಬ್ದುಲ್ ಲತೀಫ್ (32) ಬಂಧಿತರು. ಅಬ್ದುಲ್ ಲತೀಫ್ ನನ್ನು ಕೋಜಿಕ್ಕೋಡ್ ನ ವಸತಿಗೃಹದಿಂದ ಬಂಧಿಸಲಾಗಿದ್ದು, ಈತ ನೀಡಿದ ಮಾಹಿತಿಯಂತೆ ಅಬ್ದುಲ್ ರಹೀಮ್ ನನ್ನು ಬಂಧಿಸಲಾಗಿದೆ.ಈತನ ಬಳಿಯಿಂದ ರಿವಾಲ್ವರ್, ಸಜೀವ ಗುಂಡು ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಹೀಮ್ ವಿರುದ್ಧ ಸುಳ್ಯ,ಪುತ್ತೂರು,ವಿಟ್ಲ,ಮಂಜೇಶ್ವರ ಪೊಲೀಸ್ ಠಾಣೆ ಗಳಲ್ಲಿ ಹದಿನೈದಕ್ಕೂ ಅಧಿಕ ಪ್ರಕರಣಗಳು ಐದು ವಾರಂಟ್ ಗಳು ಜಾರಿಯಲ್ಲಿರುವುದಾಗಿ ತಿಳಿದು … Read more

ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದ ಸಿಎಂ‌ ಸಿದ್ದರಾಮಯ್ಯ; ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ..

ಬೆಂಗಳೂರು;‘ಗೃಹಲಕ್ಷ್ಮಿ ಯೋಜನೆ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಬುಧವಾರ ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನಾವರಣಗೊಳಿಸಿದ್ದು, ಸಚಿವ ಮುನಿಯಪ್ಪ ಉಪಸ್ಥಿತರಿದ್ದರು. ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ನೋಂದಣಿಗೆ ಗುರುತಿಸಲ್ಪಟ್ಟಿರುವ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ನಗರ ಸ್ಥಳೀಯ ಆಡಳಿತ ಕಚೇರಿ ಕೇಂದ್ರಗಳ ಮೇಲ್ವಿಚಾರಣೆಯನ್ನು … Read more

BIG NEWS ಸದನದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಬಿಜೆಪಿ ಶಾಸಕ ಯತ್ನಾಳ್; ಆಸ್ಪತ್ರೆಗೆ ರವಾನೆ

ಬೆಂಗಳೂರು;ಶಾಸಕರನ್ನು ವಿಧಾನ ಸಭೆಯಿಂದ ಅಮಾನತ್ತು ಮಾಡಲಾದ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಶಾಸಕರನ್ನು ಹೊರ ಹಾಕುವ ವೇಳೆ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರ್‍ ನಲ್ಲಿ ಕುಸಿದು ಬಿದ್ದಿರುವ ಬಗ್ಗೆ ವರದಿಯಾಗಿದೆ. ಗದ್ದಲದ ವೇಳೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅಸ್ವಸ್ಥರಾಗಿದ್ದು, ಬಿಪಿ ಜಾಸ್ತಿಯಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತುರ್ತುವಾಹನದ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಪೀಕರ್ ನಿಲುವು ಖಂಡಿಸಿ ಬಿಜೆಪಿ ಸದ್ಯಸರು ವಿಧಾನಸಭೆಯ ಬಾಗಿಲ ಮುಂಭಾಗ … Read more

ಸದನದಲ್ಲಿ ಗದ್ದಲ; ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್

ಬೆಂಗಳೂರು: ಸದನದಲ್ಲಿ ಅತಿರೇಕವಾಗಿ ವರ್ತಿಸಿದ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ಸ್ವೀಕರ್​ ಆದೇಶ ಹೊರಡಿಸಿದ್ದಾರೆ. ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಅರಗಜ್ಞಾನೇಂದ್ರ, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಯಶ್‌ಪಾಲ್‌ ಸುವರ್ಣ, ಧೀರಜ್‌ ಮುನಿರಾಜ್‌, ಉಮಾನಾಥ್‌ ಕೋಟ್ಯಾನ್‌, ಭರತ್ ಶೆಟ್ಟಿಯವರ ಹೆಸರನ್ನು ಉಲ್ಲೇಖಿಸಿದ ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿ ಆದೇಶ ಹೊರಡಿಸಿದರು. ಬಿಜೆಪಿ ಸದಸ್ಯರು ಡೆಪ್ಯುಟಿ ಸ್ಪೀಕರ್ ಮೇಲೆ ವಿದೇಯಕದ ಕಾಗದ ಪತ್ರ ಹರಿದು ಎಸೆದಿದ್ದು, ಈ ಬಗ್ಗೆ ಸ್ಪೀಕರ್​ಗೆ ಬಿಜೆಪಿ ಶಾಸಕರ ವಿರುದ್ಧ … Read more

ವಿಪಕ್ಷಗಳ ಒಕ್ಕೂಟಕ್ಕೆ ಒವೈಸಿ ಪಕ್ಷಕ್ಕಿಲ್ಲ ಆಹ್ವಾನ; ಈ ಬಗ್ಗೆ ಹಲವು ವಿಚಾರಗಳನ್ನು ಉಲ್ಲೇಖಿಸಿ ಎಐಎಂಐಎಂ ನಾಯಕರು ಪ್ರತಿಕ್ರಿಯೆ..

ಮುಂಬೈ:ಬೆಂಗಳೂರಿನಲ್ಲಿ ಮುಕ್ತಾಯಗೊಂಡ ಎರಡು ದಿನಗಳ ವಿಪಕ್ಷಗಳ ಸಭೆಯಲ್ಲಿ ತಮ್ಮ ನಾಯಕರಿಗೆ ಆಹ್ವಾನ ನೀಡದ ಪ್ರತಿಪಕ್ಷಗಳ ಒಕ್ಕೂಟವನ್ನು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಟೀಕಿಸಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪಕ್ಷದ ವಕ್ತಾರ ವಾರಿಸ್ ಪಠಾಣ್, ಜಾತ್ಯತೀತ ಪಕ್ಷಗಳು ಎಂದು ಕರೆದುಕೊಳ್ಳುತ್ತಿರುವವರು ತಮ್ಮನ್ನು ರಾಜಕೀಯ ಅಸ್ಪೃಶ್ಯರು ಎಂದು ಪರಿಗಣಿಸುತ್ತಿವೆ.ಅಸಾದುದ್ದೀನ್ ಓವೈಸಿ ಅವರ ಪಕ್ಷವನ್ನು ಯಾರಾದರೂ ಹೇಗೆ ನಿರ್ಲಕ್ಷಿಸಬಹುದೇ ಎಂದು ಪ್ರಶ್ನಿಸಿದ್ದಾರೆ. ಜಾತ್ಯತೀತ ಪಕ್ಷಗಳು ಎಂದು ಕರೆದಿಲ್ಲ, ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು, ನಿತೀಶ್ ಕುಮಾರ್, ಉದ್ಧವ್ … Read more

ಮಂಗಳೂರು:ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ, ಕಾಲೇಜು ವಿದ್ಯಾರ್ಥಿ ಮೃತ್ಯು

-ಮಹಮ್ಮದ್ ನಶತ್(21) ಮೃತ ವಿದ್ಯಾರ್ಥಿ. ಮಂಗಳೂರು:ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತ ಯುವಕನನ್ನು ವಿದ್ಯಾರ್ಥಿ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ. ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಮಂಗಳೂರು ಸಂಚಾರಿ ದಕ್ಷಿಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು … Read more

ಬಿಜೆಪಿ ರಾಜ್ಯ ಉಪಾಧ್ಯಕ್ಷರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ದೂರು

ಬಿಜೆಪಿ ರಾಜ್ಯ ಉಪಾಧ್ಯಕ್ಷರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಮುಂಬೈ: ಮಹಾರಾಷ್ಟ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ಕಿರಿಟ್ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್ ಆಗಿದ್ದು ಮಹಾರಾಷ್ಟ್ರದ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಕಿರಿಟ್ ಸೋಮಯ್ಯ ಅವರ ಬಗ್ಗೆ ಟೀಕೆಗಳು ಕೇಳಿ ಬಂದಿವೆ. ಕಿರಿಟ್ ಸೋಮಯ್ಯ ಅವರು, ಈ ವಿಡಿಯೊ ನನ್ನದಲ್ಲ. ನನ್ನ ಹೆಸರಿನಲ್ಲಿ ತಿರುಚಿದ ವಿಡಿಯೊಗಳನ್ನು ಬಿತ್ತರಿಸಲಾಗಿದೆ. ನಾನು ಯಾವುದೇ ಮಹಿಳೆ ಅಥವಾ ಮಹಿಳೆಯರಿಗೆ … Read more

ಬೆಂಗಳೂರು; ಐವರು ಶಂಕಿತರನ್ನು ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು;ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿರುವುದಾಗಿ ತಿಳಿದು ಬಂದಿದೆ. ಸಿಸಿಬಿ ಪೊಲೀಸರು ಇಂದು ಜುನೈದ್, ಸೊಹೈಲ್, ಉಮರ್, ಮುದಾಸಿರ್ ಮತ್ತು ಜಾಹಿದ್ ಎಂಬ ಶಂಕಿತರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಸದ್ಯ 7 ಪಿಸ್ತೂಲ್ , ಹಲವಾರು ಸ್ಫೋಟಕ ವಸ್ತುಗಳು ಮತ್ತು ಇತರ ವಸ್ತುಗಳನ್ನು ಮತ್ತು ಅವರ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪೊಲೀಸರ ಪ್ರಕಾರ, ಬಂಧಿತ ಐವರು ಆರೋಪಿಗಳು 2017 ರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬೆಂಗಳೂರು ಕೇಂದ್ರ … Read more

ಮಂಗಳೂರು; ಚಪ್ಪಲಿ ಕಾಣೆಯಾಗಿದೆ ಎಂದು ಪೊಲೀಸರನ್ನು ಕರೆಸಿದ ಯುವಕ!

ಮಂಗಳೂರು;ಯುವಕನೊಬ್ಬ ತನ್ನ ಚಪ್ಪಲಿ ಕಾಣೆಯಾಗಿದೆ ಎಂದು 112 ಸಹಾಯವಾಣಿ ನಂಬರಿಗೆ ಕರೆ ಮಾಡಿ ಪೊಲೀಸರನ್ನು ಕರೆಸಿದ ಘಟನೆ ನಗರದಲ್ಲಿ ನಡೆದಿದೆ. ಶರವು ದೇವಸ್ಥಾನದ ಸಮೀಪದ ಸಭಾಂಗಣಕ್ಕೆ ಆಗಮಿಸಿದ್ದ ಯುವಕ ಚಪ್ಪಲಿಯನ್ನು ಹೊರಗೆ ಬಿಟ್ಟಿದ್ದು ವಾಪಾಸ್ ಬಂದಾಗ ಅಲ್ಲಿರಲಿಲ್ಲ. ಹೀಗಾಗಿ 112 ನಂಬರಿಗೆ ಕರೆ ಮಾಡಿ ದೂರು ದಾಖಲಿಸಿದ್ದಾನೆ. ಈ ದೂರನ್ನು ಪರಿಶೀಲಿಸುವಂತೆ ಬಂದರು ಠಾಣೆಗೆ ಸಂದೇಶ ಬಂದಿತ್ತು.ಹೀಗಾಗಿ ಕರ್ತವ್ಯದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಯುವಕ ಚಪ್ಪಲಿ ಕಳವಾಗಿರುವ ವಿಷಯ ಹೇಳಿದಾಗ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು … Read more

ದುಬೈಗೆ ಹೋಗಲು ಮಗಳನ್ನು ಏರ್ ಪೋರ್ಟ್ ಗೆ ಬಿಟ್ಟು ವಾಪಾಸ್ಸಾಗುತ್ತಿದ್ದ ತಾಯಿ ಅಪಘಾತದಲ್ಲಿ ದುರ್ಮರಣ

ಹಾವೇರಿ;ಮಗಳನ್ನು ವಿದೇಶಕ್ಕೆ ಕಳುಹಿಸಿ ಮನೆಗೆ ಹಿಂತಿರುಗುತ್ತಿದ್ದ ತಾಯಿ ಕಾರು ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ರಾಣೇಬೆನ್ನೂರು ಬಳಿ ನಡೆದಿದೆ. ಜಯಂತಿ (50) ಮೃತ ದುರ್ದೈವಿ.ಘಟನೆಯಲ್ಲಿ ಕಾರು ಚಾಲಕ ವಿಠ್ಠಲ್ (47)ಎಂಬವರು ಕೂಡ ಮೃತಪಟ್ಟಿದ್ದಾರೆ. ಜಯಂತಿ ಅವರು ತಮ್ಮ ಮಗಳನ್ನು ದುಬೈ ಕಳುಹಿಸಲು ಬೆಂಗಳೂರಿನ ಏರ್ ಪೋರ್ಟ್ ಗೆ​ ಬಂದಿದ್ದರು.ಮಗಳನ್ನು ವಿಮಾನವೇರಿಸಿ ಶಿರಸಿಗೆ ವಾಪಸ್ಸಾಗುತ್ತಿದ್ದಾಗ ರಾಣೇಬೆನ್ನೂರು ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ನಿರಂತರವಾಗಿ ಕಾರು ಚಾಲನೆ ಮಾಡಿರುವ ಹಿನ್ನೆಲೆ ನಿದ್ದೆ ಕಣ್ಣಿನಲ್ಲಿ ಕಾರಿನ ನಿಯಂತ್ರಣ ತಪ್ಪಿ … Read more