ವಿಟ್ಲ;ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ
ವಿಟ್ಲ;ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ ಮೇಲೆ ಹಲ್ಲೆ ನಡೆದಿದೆ. ಪಂಚಾಯತ್ ವತಿಯಿಂದ ಅನಂತಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿ ಶುಚಿತ್ವ ಮಾಡುತ್ತಿದ್ದ ವೇಳೆ ತಂಡವೊಂದರ ನಡುವೆ ಮಾತಿನ ಚಕಮಕಿ ನಡೆದು ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿ ತಂಡ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.ಗಣೇಶ್ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.