ಮೊರೊಕ್ಕೊದಲ್ಲಿ ಪ್ರಬಲ ಭೂಕಂಪ; 1000 ಗಡಿದಾಟಿದ ಮೃತರ ಸಂಖ್ಯೆ

ಮೊರೊಕ್ಕೊ ನಗರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ 7.2ರಷ್ಟು ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 1,037 ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ ಎಂದು ಮೊರೊಕ್ಕೊ ಸಚಿವಾಲಯ ಶನಿವಾರ ತಿಳಿಸಿದೆ. ದಕ್ಷಿಣ ಮಾರುಕೇಶ್‌ನಿಂದ 70 ಕಿ.ಮೀ ದೂರದಲ್ಲಿರುವ ಐಘಿಲ್‌ ನಗರದಲ್ಲಿ ಭೂಕಂಪನ ಕೇಂದ್ರ ಬಿಂದುವಾಗಿದೆ. ಸೆಪ್ಟೆಂಬರ್​ 8ರ ತಡರಾತ್ರಿ 11 ಘಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ. ಅಲ್-ಹೌಜ್, ಮರ್ರಾಕೇಶ್, ಔರ್ಜಾಜೆಟ್, ಅಜಿಲಾಲ್, ಚಿಚೌವಾ ಮತ್ತು ತಾರೌಡಾಂಟ್ ಪ್ರಾಂತ್ಯಗಳಲ್ಲಿ ಸಾವುನೋವುಗಳು ವರದಿಯಾಗಿವೆ ಎಂದು ಮೊರಾಕ್ಕೋದ ಆಂತರಿಕ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಅವಶೇಷಗಳಡಿ … Read more

ಬೆಳ್ತಂಗಡಿ; ಯುವಕ ಹೃದಯಾಘಾತದಿಂದ ಮೃತ್ಯು

ಬೆಳ್ತಂಗಡಿ: ಯುವಕನೊಬ್ಬ ಮನೆಯಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕಿರ್ನಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಕಿರ್ನಡ್ಕ ನಿವಾಸಿ ಕಿಟ್ಟಣ್ಣ ನಾಯ್ಕ ಮತ್ತು ವೇದಾವತಿ ದಂಪತಿಯ ಪುತ್ರ ಪ್ರದೀಪ್ (25) ಎಂದು ಗುರುತಿಸಲಾಗಿದೆ. ಹೃದಯಾಘಾತವಾದ ತಕ್ಷಣವೇ ಉಜಿರೆ ಖಾಸಗಿ ಆಸ್ಪತ್ರೆಗೆ ಅವರಿಗೆ ದಾಖಲಿಸಲಾಗಿದೆ.ಅದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಪ್ರದೀಪ್ ಸಹೋದರಿ ಪದ್ಮಾವತಿ, ಸಹೋದರ ನಿತೇಶ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಬಿಜೆಪಿ- ಜೆಡಿಎಸ್ ಮೈತ್ರಿ; ಸಿಎಂ ಇಬ್ರಾಹೀಂ ಹೇಳಿದ್ದೇನು ಗೊತ್ತಾ?

ಬೆಂಗಳೂರು:ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬಗ್ಗೆ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ರಾಜ್ಯದಲ್ಲಿ ಮೈತ್ರಿ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ನಗರದಲ್ಲಿಂದು ಪತ್ರಿಕಾ ಗೋಷ್ಟಿಯಲ್ಲಿ ಮಾತಾಡಿದ ಸಿಎಂ ಇಬ್ರಾಹೀಂ, ತಾವು ಕಾಂಗ್ರೆಸ್ ಬಿಟ್ಟು ಜೆಡಿಎಸ್ ಪಕ್ಷ ಸೇರಿದ್ದಕ್ಕೆ ಯಾವುದೇ ಕೊರಗು ಪಶ್ಚಾತ್ತಾಪ ಇಲ್ಲ. ಮಂತ್ರಿಯಾಗಲಿಲ್ಲ ಅನ್ನೋ ಕೊರಗಿಗಿಂತ ಹೆಚ್ಚು ಕಷ್ಟ ಕಾಲದಲ್ಲಿ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಜೊತೆ ನಿಂತುಕೊಂಡ ತೃಪ್ತಿ ಇದೆ ಎಂದು ಹೇಳಿದರು. 92 ವರ್ಷದ ದೇವೇಗೌಡರ ಜೊತೆ … Read more

ಸೌಜನ್ಯ ಪ್ರಕರಣ; ಮರು ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು:ಬೆಳ್ತಂಗಡಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ವಿಶೇಷ ತನಿಖಾ ತಂಡದಿಂದ ಹೊಸದಾಗಿ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ ವಕೀಲ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ.ನವೀನ್ ಕುಮಾರ್ ಮತ್ತು ಬಲ್ವಾಡು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ, ಅರ್ಜಿಯಲ್ಲಿ ಅರ್ಜಿದಾರರು ಎತ್ತಿರುವ … Read more