ವಿಶ್ವದ ಅತ್ಯಂತ ಹಿರಿಯ‌ ಮಹಿಳೆ 129ನೇ ವಯಸ್ಸಿನಲ್ಲಿ ನಿಧನ

ವಿಶ್ವದ ಅತ್ಯಂತ ಹಿರಿಯ ಮಹಿಳೆ ಕೊಕು ಇಸ್ತಾಂಬುಲೋವಾ ತಮ್ಮ 129ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರಷ್ಯಾದ ಚೆಚೆನ್ಯಾ ಗ್ರಾಮದ ನಿವಾಸಿಯಾಗಿರುವ ಅವರು ಮನೆಯಲ್ಲಿಯೇ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಕೊಕು ಇಸ್ತಾಂಬುಲೋವಾ ಮೊಮ್ಮಗ ಇಲ್ಯಾಸ್​ ಅಬುಬರಕೋವ್​ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ಅಜ್ಜಿ ನಿಧನದ ದಿನವೂ ಚೆನ್ನಾಗಿಯೇ ಇದ್ದರು ಎಂದು ಹೇಳಿದ್ದಾರೆ. ಅಜ್ಜಿ ನಮ್ಮ ಜೊತೆ ತಮಾಷೆ ಮಾಡಿಕೊಂಡು ಮಾತನಾಡುತ್ತಿದ್ದರು.ಇದ್ದಕ್ಕಿದ್ದಂತೆಯೇ ಅಸ್ವಸ್ಥರಾದರು. ಕೂಡಲೇ ನಾವು ವೈದ್ಯರನ್ನು ಕರೆಸಿದ್ದೆವು.ಆಗ ಅಜ್ಜಿಗೆ ರಕ್ತದೊತ್ತಡ ಕಡಿಮೆಯಾಗಿದೆ ಎಂಬ ವಿಚಾರ ನಮಗೆ ತಿಳಿಯಿತು.ಅವರನ್ನು … Read more

ಮುಲ್ಕಿ; ಬೈಕ್ ಗೆ ಕಾರು ಢಿಕ್ಕಿಯಾಗಿ ಯುವತಿ ಮೃತ್ಯು

ಮುಲ್ಕಿ: ಬೈಕ್ ಗೆ ಕಾರು ಢಿಕ್ಕಿಯಾಗಿ ಬೈಕ್ ಸಹಸವಾರೆ ಯುವತಿ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮುಲ್ಕಿ ಜಂಕ್ಷನ್ ಬಳಿ ನಡೆದಿದೆ. ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಮೃತ ಯುವತಿ.ಗಾಯಾಳು ಬೈಕ್ ಸವಾರನನ್ನು ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ (21)ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನ್ನು ಕಾರು ದೂಡಿಕೊಂಡು ಹೋಗಿದ್ದು, … Read more

ಅಡ್ಡಗೋಡೆಯಿಲ್ಲದೆ ಲಕ್ಷಾಂತರ ವೆಚ್ಚದಲ್ಲಿ 4 ಸಾರ್ವಜನಿಕ ಶೌಚಾಲಯ ನಿರ್ಮಾಣ

ಅಡ್ಡಗೋಡೆಯಿಲ್ಲದೆ ಲಕ್ಷಾಂತರ ವೆಚ್ಚದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಉತ್ತರಪ್ರದೇಶ; ಅಮೇಥಿ ಜಿಲ್ಲೆಯಲ್ಲಿ ಅಡ್ಡ ಗೋಡೆಯಿಲ್ಲದೆ ನಾಲ್ಕು ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದ್ದು, ಇದೀಗ ಸಾರ್ವಜನಿಕ ಶೌಚಾಲಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ಜಗದೀಶ್‌ಪುರ ವಿಧಾನಸಭೆಯ ಕಟೆಹೆಟಿ ಗ್ರಾಮದ ಸಮುದಾಯ ಶೌಚಾಲಯದಲ್ಲಿ ಅಕ್ಕಪಕ್ಕದಲ್ಲಿ ನಾಲ್ಕು ಆಸನಗಳನ್ನು ಹಾಕಲಾಗಿದ್ದು, ಅವುಗಳ ನಡುವೆ ಗೋಡೆಗಳಿಲ್ಲ. ಈ ಶೌಚಾಲಯದ ವೀಡಿಯೋ ಮಾಡಿ ಕೆಲವರು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ್ದಾರೆ. ವೈರಲ್‌ ವಿಡಿಯೋ ನೋಡಿ ಜನರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಈ … Read more

ಕೊಪ್ಪಳದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ; ಚೈತ್ರಾ ಟೀಂ ವಂಚನೆ ಪ್ರಕರಣ ಬಯಲಾದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬಯಲು

ಚಿತ್ರ;ಟಿಕೆಟ್ ಆಕಾಂಕ್ಷಿ ಗಾಯತ್ರಿ ಕೊಪ್ಪಳ; ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬೈಂದೂರಿನ ಟಿಕೆಟ್ ಕೊಡಿಸುವುದಾಗಿ 7 ಕೋಟಿ ವಂಚನೆ ಮಾಡಿದ ಚೈತ್ರಾ ಕುಂದಾಪುರ ಗ್ಯಾಂಗ್ ಮಾದರಿಯಲ್ಲೇ ಟಿಕೆಟ್ಗಾಗಿ ನಡೆದ ಮತ್ತೊಂದು ಡೀಲ್ ಬಹಿರಂಗವಾಗಿದೆ. ಕೊಪ್ಪಳದ ಕನಕಗಿರಿ ಮೀಸಲು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ ಆರೋಪದಡಿ ಮೂವರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ತಿಮ್ಮಾರೆಡ್ಡಿ ಎಂಬುವರು ಜುಲೈ 19ರಂದು ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ತಿಮ್ಮಾರೆಡ್ಡಿ ಪತ್ನಿ ಗಾಯತ್ರಿಗೆ ಟಿಕೆಟ್ ಕೊಡಿಸುವುದಾಗಿ 21ಲಕ್ಷ … Read more

ಕಾಸರಗೋಡು; ತಾಯಿ- ಮಗಳ ಮೃತದೇಹ ಬಾವಿಯಲ್ಲಿ ಪತ್ತೆ

-ರುಬೀನಾ, ಮರಿಯಾ ಮೃತದೇಹ ಪತ್ತೆ ಕಾಸರಗೋಡು: ಉದುಮ ಸಮೀಪದ ಕಳ್ನಾಡ್ ನಲ್ಲಿ ತಾಯಿ ಮತ್ತು ಮಗಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ನಡೆದಿದೆ. ಕಳ್ನಾಡ್ ಅರಮಂಗಾನದ ತಾಜುದ್ದೀನ್ ರವರ ಪತ್ನಿ ರುಬೀನಾ (33) ಮತ್ತು ಪುತ್ರಿ. ಹನಾನ್ ಮರಿಯಾ(5) ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ನಿನ್ನೆ ತಾಯಿ-ಮಗಳು ನಾಪತ್ತೆಯಾಗಿದ್ದು ಹುಡುಕಾಟ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಮೇಲ್ಪರಂಬ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದು, ಪೊಲೀಸರು ಹಾಗೂ ಅಗ್ನಿ … Read more