ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ಬೆತ್ತಲೆಗೊಳಿಸಿ ಥಳಿತ

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ಬೆತ್ತಲೆಗೊಳಿಸಿ ಥಳಿತ ಉತ್ತರಪ್ರದೇಶ; ಆಗ್ರಾದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವನಿಗೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಗ್ರಾಮಸ್ಥರಿಂದ ಥಳಿತಕ್ಕೊಳಗಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ಸಂದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಸಂದೀಪ್ ಕುಮಾರ್ ಕುಡಿದ ಅಮಲಿನಲ್ಲಿ ಮಹಿಳೆಯ ಮನೆಯ ಛಾವಣಿಯ ಮೂಲಕ ಹಾರಿ ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ.ಈ ವೇಳೆ ಅವರು ಜೋರಾಗಿ ಕೂಗಾಡಿದ್ದಾರೆ. … Read more

ಆಟವಾಡುವಾಗ ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು

ಆಟವಾಡುವಾಗ ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು ತುಮಕೂರು:ಆಟವಾಡುತ್ತಿದ್ದ ವೇಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಕುಣಿಗಲ್ ಪಟ್ಟಣದಲ್ಲಿ ವರದಿಯಾಗಿದೆ. ಋತ್ವಿಕ್‌ (10) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ಮನೆ ಸಮೀಪ ಆಟ ಆಡುತ್ತಿದ್ದ ವೇಳೆ ಋತ್ವಿಕ್ ಸಮೀಪದಲ್ಲಿದ್ದ ವಿದ್ಯುತ್ ತಂತಿಯನ್ನು ಮೆಟ್ಟಿದ್ದ. ಆಗ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು.ಈ ಕುರಿತು ಪ್ರಕರಣ ದಾಖಲಾಗಿದೆ.

ಬೀದಿ ನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ; ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲು

ಬೀದಿ ನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ; ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲು ನವದೆಹಲಿ;ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಾಜೌರಿ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಪ ಪೊಲೀಸ್ ಆಯುಕ್ತ ವಿಚಿತ್ರಾ ವೀರ್ ಮಾತನಾಡಿ, ವಿಡಿಯೋದ ಸತ್ಯಾಸತ್ಯತೆಯ ಬಗ್ಗೆ … Read more

ಸುರತ್ಕಲ್; ರಸ್ತೆ ದಾಟಲು ನಿಂತಿದ್ದ ಯುವಕರಿಗೆ ಬಸ್ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಸುರತ್ಕಲ್; ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಎಕ್ಸ್ ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಹಳೆಯಂಗಡಿ ಇಂದಿರಾ ನಗರ ನಿವಾಸಿ‌ ಮುಹಮ್ಮದ್ ಶಾಹಿಲ್(20) ಮತ್ತು ಅರಾಫತ್(19) ಎಂದು ಗುರುತಿಸಲಾಗಿದೆ. ಶಾಹಿಲ್ ಮತ್ತು ಅರಾಫತ್ ಬೈಕ್ ನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಮಂಗಳೂರು ನಿಂದ ಉಡುಪಿ‌ ಕಡೆಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ಬಸ್‌ ಚಾಲಕನ ನಿರ್ಲಕ್ಷ್ಯತನದಿಂದ ಯುವಕರಿಗೆ ಢಿಕ್ಕಿ ಹಿಡೆದಿದೆ. ಘಟನೆಯಿಂದ ಅರಾಫತ್ … Read more

ಮೀನು ತಿಂದ ಬಳಿಕ ಅಸ್ವಸ್ಥಳಾದ ಮಹಿಳೆ; ಅಂಗಾಂಗಗಳು ನಿಷ್ಕ್ರಿಯ!

ಮೀನು ತಿಂದ ಬಳಿಕ ಅಸ್ವಸ್ಥಳಾದ ಮಹಿಳೆ;ಅಂಗಾಂಗಗಳು ನಿಷ್ಕ್ರಿಯ! ಕ್ಯಾಲಿಫೋರ್ನಿಯಾದಲ್ಲಿ ಮಹಿಳೆಯೊಬ್ಬರು ಮೀನು ತಿಂದು ತನ್ನ ನಾಲ್ಕು ಅಂಗಗಳನ್ನು ಕಳೆದುಕೊಂಡಿರುವ ದಾರುಣ ಘಟನೆಯೊಂದು ನಡೆದಿದೆ. ಬ್ಯಾಕ್ಟೀರಿಯಾದ ಮಾರಣಾಂತಿಕ ಸ್ಟ್ರೈನ್‌ನಿಂದ ಕಲುಷಿತಗೊಂಡಿರುವ ಕಡಿಮೆ ಬೇಯಿಸಿದ ತಿಲಾಪಿಯಾ ಮೀನಿನ ಸೇವನೆ ಬಳಿಕ ಮಹಿಳೆ ಅಂಗಾಂಗವನ್ನು ಕಳೆದುಕೊಂಡಿದ್ದಾಳೆ ಎಂದು ವರದಿಯಾಗಿದೆ ಲಾರಾ ಬರಾಜಾಸ್(40) ಆಸ್ಪತ್ರೆಯಲ್ಲಿ ಒಂದು ತಿಂಗಳಿನಿಂದ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸ್ಥಳೀಯ ಮಾರುಕಟ್ಟೆಯಲ್ಲಿ ಖರೀದಿಸಿದ ಮತ್ತು ಮನೆಯಲ್ಲಿ ತಯಾರಿಸಿದ ಮೀನಿನ ಖಾದ್ಯಗಳನ್ನು ತಿಂದ ನಂತರ ಬರಜಾಸ್ ಅಸ್ವಸ್ಥಗೊಂಡಿದ್ದಾಳೆ ಎಂದು ಮೆಸ್ಸಿನಾ ಎನ್ನುವವರು ತಿಳಿಸಿದ್ದಾರೆ. … Read more