ಸುರತ್ಕಲ್; ನದಿಗೆ ಬಿದ್ದು ಯುವಕ ಮೃತ್ಯು

ಸುರತ್ಕಲ್: ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ನಡೆದಿದೆ. ಮೃತರನ್ನು ಮೂಲತಃ ಬಜ್ಪೆ ನಿವಾಸಿ ಸದ್ಯ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಾಕಿರ್‌(30) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಾಕಿರ್‌ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು. ಈ ವೇಳೆ ಶಾಕಿರ್‌ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನಾಪತ್ತೆಯಾಗಿದ್ದರು. ತಕ್ಷಣ ಸ್ಥಳಕ್ಕೆ … Read more

ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್; ಬಿಡುಗಡೆಗೆ ಕೋರ್ಟ್ ಆದೇಶ

ಎರಡನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಮುರುಘಾ ಶರಣರ ಬಿಡುಗಡೆಗೆ ಆದೇಶ ನೀಡಿದೆ. ಜಾಮೀನು ರಹಿತ ಬಂಧನ ವಾರೆಂಟ್ ಗೆ ತಡೆ ನೀಡಿದ್ದು, ಚಿತ್ರದುರ್ಗಕ್ಕೆ ಕರೆತಂದಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಮತ್ತು ಅವರನ್ನು ಬಿಡುಗಡೆ ಮಾಡಬೇಕೆಂದು ಹೈಕೋರ್ಟ್ ಆದೇಶ ನೀಡಿದೆ. ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿಂದ ನಿರ್ದೇಶನ ನೀಡಲಾಗಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಆದೇಶ ನೀಡಿದ್ದು, ಇದರೊಂದಿಗೆ ಮುರುಘಾ … Read more

ಗೋಹತ್ಯೆ ಪ್ರಕರಣದ ಆರೋಪಿಯ ಎನ್ ಕೌಂಟರ್

ಗೋಹತ್ಯೆ ಪ್ರಕರಣದ ಆರೋಪಿಯೋರ್ವನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ರಾಮ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸಾಜಿದ್ (23) ಹತ್ಯೆಯಾದ ಯುವಕ. ಘಟನೆಯಲ್ಲಿ ಬಬ್ಲು ಎಂಬಾತ ಗಾಯಗೊಂಡಿದ್ದಾನೆ. ರಾಮ್‌ಪುರ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಗೋಹತ್ಯೆ ಪ್ರಕರಣದ ಆರೋಪಿ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ಹೇಳಿದ್ದಾರೆ. ಪಟ್ವಾಯಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗೋಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದಾಗ, ಆರೋಪಿಗಳು ಶನಿವಾರ ತಡರಾತ್ರಿ ಮೊರಾದಾಬಾದ್‌ಗೆ ವಾಹನದಲ್ಲಿ ಬರುತ್ತಾರೆ ಎಂಬ ಮಾಹಿತಿ ನಮಗೆ ಬಂದಿತ್ತು. … Read more

ಬೆಂಗಳೂರಿನ ಭೂ ವಿಜ್ಞಾನಿ ಪ್ರತಿಮ ಕೊಲೆ ಕೇಸ್ ಗೆ ಟ್ವಿಸ್ಟ್..

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಕಿರಣ್ ಹಣ ಹಾಗೂ ಚಿನ್ನಾಭರಣಕ್ಕಾಗಿ ಪ್ರತಿಮಾರನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಆರೋಪಿ ಕಿರಣ್ ಪ್ರತಿಮಾ ಕೊಲೆಗೆ ಸಂಚು ರೂಪಿಸಿ ಮನೆಗೆ ನುಗ್ಗಿ ಅವರನ್ನು ಕೊಲೆ ಮಾಡಿದ್ದು, ಬಳಿಕ ಮನೆಯಲ್ಲಿದ್ದ ಹಣ,ಚಿನ್ನಾಭರಣದ ಜೊತೆ ಪರಾರಿಯಾಗಿದ್ದ. ಆರೋಪಿ 5 ಲಕ್ಷ ರೂ.ನಗದು, 3ರಿಂದ 4 ಲಕ್ಷ ಮೌಲ್ಯದ 2 ಚಿನ್ನದ ಬಳೆ, ಬ್ರೇಸ್​​ ಲೇಟ್ ಅನ್ನು ಕಳವು ಮಾಡಿದ್ದನು. ಆರೋಪಿ ಕಿರಣ್ … Read more