ಅನ್ಯಧರ್ಮದ ಯುವತಿ ಜೊತೆ ಮಗ ಪರಾರಿ; ದಂಪತಿಯನ್ನು ಹೊಡೆದು ಕೊಲೆ ಮಾಡಿದ ಗುಂಪು

-ಅಬ್ಬಾಸ್ ಮತ್ತು ಪತ್ನಿ ಕಮರುಲ್ ನಿಶಾ ಹತ್ಯೆಗೊಳಗಾದವರು.

ಸೀತಾಪುರ;ದಂಪತಿಯನ್ನು ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.

ಶುಕ್ರವಾರ ಘಟನೆ ನಡೆದಿದ್ದು, ದುಷ್ಕರ್ಮಿಗಳ ದಾಳಿಗೆ ಅಬ್ಬಾಸ್ ಮತ್ತು ಅವರ ಪತ್ನಿ ಕಮರುಲ್ ನಿಶಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಬಂಧಿತರಲ್ಲಿ ಓರ್ವನ ಮಗಳ ಜೊತೆ ಹತ್ಯೆಗೊಳಗಾದ ದಂಪತಿಯ ಮಗನಿಗೆ ಸಂಬಂಧ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಜೊತೆಗಿನ ಸಂಬಂಧದ ಹಿನ್ನೆಲೆ ಶೌಕತ್ ಗೆ ಬಂಧಿಸಲಾಗಿತ್ತು.ಕೆಲವು ದಿನಗಳ ಹಿಂದೆ ಅಬ್ಬಾಸ್ ಅವರ ಮಗ ಶೌಕತ್ ಜೈಲಿನಿಂದ ಹೊರಬಂದಾಗ, ಕುಟುಂಬದ ಕೆಲವು ಸದಸ್ಯರ ಗುಂಪು ದಂಪತಿಗಳ ಮೇಲೆ ದಾಳಿ ನಡೆಸಲು ತಯಾರಿ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಸ್ಥರ ಪ್ರಕಾರ ಮೃತ ದಂಪತಿ ಪುತ್ರ ಶೌಕತ್, ಆರೋಪಿ ರಾಂಪಾಲ್ ಅವರ ಪುತ್ರಿ ರೂಬಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ. ಶೌಕತ್ 2020ರಲ್ಲಿ ರೂಬಿ ಜೊತೆ ಪರಾರಿಯಾಗಿದ್ದ,ಆಗ ರೂಬಿ ಅಪ್ರಾಪ್ತ ವಯಸ್ಸಿನವಳಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ಶೌಕತ್ ನನ್ನು ಜೈಲಿಗೆ ಕಳುಹಿಸಿದ್ದರು. ಬಿಡುಗಡೆ ಬಳಿಕ ಮತ್ತೆ ಜೂನ್‌ನಲ್ಲಿ ರೂಬಿಯ ಜೊತೆ ಮದುವೆಯಾಗಿದ್ದ ಎಂದು ಚಕ್ರೇಶ್ ಮಿಶ್ರಾ ಹೇಳಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು