ಶಾರುಕ್ ಖಾನ್ ಗೆ ಶೂಟಿಂಗ್ ವೇಳೆ ಗಂಭೀರ ಗಾಯ; ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ

ನವದೆಹಲಿ;ಬಾಲಿವುಡ್ ಸ್ಟಾರ್ ಶಾರುಖ್ ಖಾನ್‌ಗೆ ಶೂಟಿಂಗ್ ವೇಳೆ ಗಾಯಗಳಾಗಿದ್ದು ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಾರುಖ್ ಖಾನ್ ಮೂಗಿಗೆ ಗಾಯವಾಗಿದ್ದು ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಶಾರುಖ್ ಖಾನ್ ಅಮೆರಿಕಾದ ಲಾಸ್ ಏಂಜಲೀಸ್‌ನಲ್ಲಿ ಶೂಟಿಂಗ್‌ನಲ್ಲಿ ಇದ್ದಾಗ ಘಟನೆ ನಡೆದಿದೆ.

ತಕ್ಷಣ ಅವರನ್ನು ಲಾಸ್ ಏಂಜಲೀಸ್‌ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ತೀವ್ರ ರಕ್ತಸ್ರಾವ ಆಗುತ್ತಿದ್ದ ಕಾರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

ಶಾರುಖ್ ಸದ್ಯ ಆರೋಗ್ಯವಾಗಿದ್ದಾರೆ ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ಮೂಲಗಳು ಮಾಹಿತಿ ನೀಡಿದೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.

ಟಾಪ್ ನ್ಯೂಸ್