ಸ್ಯಾಂಡಲ್ ವುಡ್ ನಟಿ ರಮ್ಯಾ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡಿದ್ದು, ಇದಕ್ಕೆ ಸ್ವತಃ ರಮ್ಯಾ ಅವರೇ ಸ್ಪಷ್ಟನೆಯನ್ನು ನೀಡಿದ್ದಾರೆ.
ನಟಿ ರಮ್ಯಾ ಅಲಿಯಾಸ್ ದಿವ್ಯಾ ಸ್ಪಂದನಾ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಕೇಳಿ ಜನರು ಆಘಾತಕ್ಕೊಳಗಾಗಿದ್ದಾರೆ.
ಎಕ್ಸ್ ನಲ್ಲಿ ಅನೇಕ ಜನರು ರಮ್ಯಾ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಆದರೆ ರಮ್ಯಾ ಅವರಿಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ಸುಳ್ಳು ಸುದ್ದಿ ಹಬ್ಬಿಸಿದ ಮೀಡಿಯಾ ಹಾಗೂ ಕಿಡಿಗೇಡಿಗಳಿಗೆ ಅಭಿಮಾನಿಗಳು ತರಾಟೆ ತೆಗೆದುಕೊಂಡಿದ್ದಾರೆ.
ಸ್ಯಾಂಡಲ್ವುಡ್ ನಟಿ ರಮ್ಯಾ ಇನ್ನಿಲ್ಲ ಎನ್ನುವ ಸುಳ್ಳು ಸುದ್ದಿ ಹರಿದಾಡಿದ್ದು ರಮ್ಯಾ ಅಭಿಮಾನಿಗಳು ಸಿಟ್ಟಾಗಿದ್ದಾರೆ. ತಮಿಳಿನ ಕೆಲ ವೆಬ್ಸೈಟ್ ತಮಿಳು ಮೂಲದ ಸೋಷಿಯಲ್ ಮೀಡಿಯಾ ಬಳಕೆದಾರರು ರಮ್ಯಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಸುದ್ದಿ ಹಬ್ಬಿಸಿದ್ದರು. ರಮ್ಯಾ ಅವರು ಚೆನ್ನಾಗಿದ್ದಾರೆ. ಇದು ಸುಳ್ಳು ಸುದ್ದಿ ಎಂದು ಅವರ ಸ್ನೇಹಿತೆ ಸುನಯನಾ ಟ್ವಿಟ್ ಮೂಲಕ ಖಚಿತಪಡಿಸಿದ್ದಾರೆ.
ನಟಿ ರಮ್ಯಾ ಸದ್ಯ ಯುರೋಪ್ ಪ್ರವಾಸದಲ್ಲಿದ್ದಾರೆ. ಕೆಲ ದಿನಗಳ ಹಿಂದೆ ಅಲ್ಲಿಂದ ಫೋಟೋಗಳು ಹಾಗೂ ವಿಡಿಯೋ ಕೂಡಾ ಶೇರ್ ಮಾಡಿದ್ದರು.