ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್ ಚಾಲಕ ಮೃತಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶ ಅಡ್ಕಸ್ಥಳದ ಸಮೀಪ ನಡೆದಿದೆ.
ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫಾ (43) ಎಂದು ಗುರುತಿಸಲಾಗಿದೆ.
ಬಸ್ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡ ಮುಸ್ತಫಾ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಈ ವೇಳೆ ಅವರು ಮೃತಪಟ್ಟಿದ್ದಾರೆ.ಪಿಕಪ್ ನಲ್ಲಿದ್ದ ಇನ್ನೋರ್ವ ಗಾಯಗೊಂಡಿದ್ದಾರೆ.
ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.