ಮಂಗಳೂರು; ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ
ಅಡ್ಯಾರ್‌ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ.
ಶರಪುದ್ದೀನ್ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ.
ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರ ರಕ್ತಸ್ರಾವವುಂಟಾಗಿತ್ತು ಎನ್ನಲಾಗಿದೆ.
ಘಟನೆಯಲ್ಲಿ ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.