-ಅಕ್ಬರ್ ಪಾಶ(61) ಹಾಗೂ ಪತ್ನಿ ಖತೀಜಾಬಿ(46) ಮೃತರು.
ಪಡುಬಿದ್ರೆ:ಸ್ಕೂಟರ್ ಮತ್ತು ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮೂಲ್ಕಿ ಸೇತುವೆ ಮೇಲೆ ನಡೆದಿದೆ.
ತೀರ್ಥಹಳ್ಳಿ ನಿವಾಸಿಗಳಾದ ಅಕ್ಬರ್ ಪಾಶ(61) ಹಾಗೂ ಪತ್ನಿ ಖತೀಜಾಬಿ(46) ಮೃತರು ಎಂದು ಗುರುತಿಸಲಾಗಿದೆ.
ಇವರು ಸ್ಕೂಟರ್ ನಲ್ಲಿ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಸಂಚರಿಸುವಾಗ ಸ್ಕೂಟರ್ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು, ಈ ವೇಳೆ ಅದೇ ಮಾರ್ಗದಲ್ಲಿ ಬಂದ ಟ್ಯಾಂಕರ್ ಇಬ್ಬರ ತಲೆಯ ಮೇಲೆ ಹರಿದ ಪರಿಣಾಮ ಇಬ್ಬರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.