ನ್ಯಾಯಾಲಯದ ಆವರಣದಲ್ಲಿದ್ದ ಮಸೀದಿ ತೆರವುಗೊಳಿಸುವಂತೆ ಹೈಕೋರ್ಟ್ ನೀಡಿದ್ದ ತೀರ್ಪುನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ಉತ್ತರಪ್ರದೇಶ;ಹೈಕೋರ್ಟ್ ಆವರಣದಿಂದ ಮಸೀದಿಯನ್ನು ತೆರವವುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ 2017ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ವಿಶೇಷ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
2017ರ ನವೆಂಬರ್‌ನಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ವಕ್ಫ್ ಮಂಡಳಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ನ್ಯಾಯಮೂರ್ತಿ ಎಂ.ಆರ್. ಶಾ ನೇತೃತ್ವದ ಪೀಠವು ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.
ಹೈಕೋರ್ಟ್ ಮೂರು ತಿಂಗಳ ಒಳಗೆ ಮಸೀದಿಯನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.