ಆಂಬ್ಯುಲೆನ್ಸ್ ಪಲ್ಟಿಯಾಗಿ ಭೀಕರ ಅಪಘಾತ, ಮೂವರು ದುರ್ಮರಣ, ಮೂವರಿಗೆ ಗಂಭೀರ ಗಾಯ

-ರಹಮತ್, ಅಬಿದಾ, ಫೆಮಿನಾ ಮೃತರು

ತ್ರಿಶೂರ್:ಚೋವನ್ನೂರಿನಲ್ಲಿ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮೂವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಡೆದಿದೆ.

ಬುಧವಾರ ನಸುಕಿನ ಜಾವ 1 ಗಂಟೆ ಸುಮಾರಿಗೆ ತ್ರಿಶೂರ್‌ನ ಚೋವನ್ನೂರಿನಲ್ಲಿ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಫೆಮಿನಾ, ರಹಮತ್ ಮತ್ತು ಅಬಿದಾ ಎಂಬ ಮೂವರು ಸಾವನ್ನಪ್ಪಿದ್ದಾರೆ.

ನ್ಯುಮೋನಿಯಾದಿಂದ ಬಳಲುತ್ತಿದ್ದ ಫೆಮಿನಾ ಅವರನ್ನು ಹತ್ತಿರದ ವೈದ್ಯಕೀಯ ಸೌಲಭ್ಯಕ್ಕೆ ಸಾಗಿಸುತ್ತಿದ್ದ ಆಂಬ್ಯುಲೆನ್ಸ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಆಂಬ್ಯುಲೆನ್ಸ್ ಅತಿವೇಗದಲ್ಲಿ ಚಲಿಸುತ್ತಿದ್ದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಇತರ ಇಬ್ಬರು ಪ್ರಯಾಣಿಕರಾದ ಫಾರಿಸ್ ಮತ್ತು ಸಾದಿಕ್ ಮತ್ತು ಚಾಲಕ ಶುಹೈಬ್‌ಗೆ ತೀವ್ರ ಗಾಯಗಳಾಗಿವೆ.ಮೂವರೂ ತ್ರಿಶೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಂಬ್ಯುಲೆನ್ಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗುವ ಮುನ್ನ ಮರಕ್ಕೆ ಡಿಕ್ಕಿ ಹೊಡೆದಿತ್ತು.

ಟಾಪ್ ನ್ಯೂಸ್