ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (76) ಅವರನ್ನು ಅಮೆರಿಕಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಬಗ್ಗೆ ವರದಿಯಾಗಿದೆ.
ನೀಲಿಚಿತ್ರಗಳ ನಟಿ ಸ್ಟಾರ್ಮಿ ಡೇನಿಯಲ್ಸ್ ಜೊತೆ ಲೈಂಗಿಕ ಕ್ರಿಯೆ ನಡೆಸಿ ಟ್ರಂಪ್ ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಟ್ರಂಪ್ ವಿರುದ್ಧ ಕೇಳಿಬಂದ ಆರೋಪದ ತನಿಖೆ ನಡೆಸಲಾಗುವುದು ಎಂದು ಗ್ರ್ಯಾಂಡ್ ಜ್ಯೂರಿ ಶಿಫಾರಸು ಮಾಡಿದ್ದ ಹಿನ್ನೆಲೆಯಲ್ಲಿ ಭಾರೀ ಬಿಗಿಭದ್ರತೆಯೊಂದಿಗೆ ಟ್ರಂಪ್ ಮ್ಯಾನ್‌ಹಟನ್ ನ್ಯಾಯಾಲಯಕ್ಕೆ ಹಾಜರಾದರು.ಈ ವೇಳೆ ಅವರನ್ನು ಬಂಧಿಸಿದ ಪೊಲೀಸರು ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ಈ ವೇಳೆ ಸ್ಥಳೀಯ ನ್ಯಾಯಾಲಯ ಲೈಂಗಿಕ ಪ್ರಕರಣ ಮುಚ್ಚಿಡಲು ಹಣ ನೀಡಿದ್ದೂ ಸೇರಿದಂತೆ ಹಣ ವಂಚನೆಯ 30ಕ್ಕೂ ಹೆಚ್ಚು ದೋಷಾರೋಪಗಳನ್ನು ಹೊರಿಸಿದೆ.
ಆದರೆ ತಮ್ಮ ಮೇಲಿನ ಆರೋಪಗಳನ್ನು ಟ್ರಂಪ್ ನಿರಾಕರಿಸಿದ್ದಾರೆ.ಟ್ರಂಪ್ ಕ್ರಿಮಿನಲ್ ಆರೋಪಕ್ಕೆ ತುತ್ತಾದ ಅಮೆರಿಕದ ಮೊದಲ ಮಾಜಿ ಅಧ್ಯಕ್ಷರಾಗಿದ್ದಾರೆ.