ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ; ಭೇಟಿ ವೇಳೆ ಸಿಎಂ ಹೇಳಿದ್ದೇನು?

ನವದೆಹಲಿ;ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕರ್ನಾಟಕದ ಸಿಎಂ ಸಿದ್ಧರಾಮಯ್ಯ ಅವರು ಭೇಟಿ‌ ಮಾಡಿ‌
ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ ಅಂಶಗಳನ್ನು ಚರ್ಚಿಸಿದ್ದಾರೆ.

ಸಿದ್ದರಾಮಯ್ಯ ಅವರು ಕೃಷ್ಣಮೆನನ್ ಮಾರ್ಗದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಸಿಎಂ ಆದ ನಂತರ ಮೊದಲ ಬಾರಿ ಭೇಟಿ ನೀಡಿದ ಸಿದ್ದರಾಮಯ್ಯಗೆ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ.
ಭೇಟಿ ವೇಳೆ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆಯಾಗಿರುವ ವಿಚಾರವನ್ನು ಸಿಎಂ ಚರ್ಚಿಸಿದ್ದಾರೆ‌‌.

ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎಂದು ಮುಖ್ಯಮಂತ್ರಿ ಅಮಿತ್ ಶಾ ಬಳಿ ಹೇಳಿದ್ದಾರೆ.

ಈ ಕುರಿತು ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.

ಗೃಹ ಸಚಿವರಿಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಟಾಪ್ ನ್ಯೂಸ್