2B ಮೀಸಲಾತಿ ರದ್ದತಿಯನ್ನು ಸಮರ್ಥಿಸಿದ ಅಮಿತ್ ಶಾ; ಕರ್ನಾಟಕ ಚುನಾವಣೆ ಪ್ರಚಾರದಲ್ಲಿರುವ ಅಮಿತ್ ಶಾ ಮೀಸಲಾತಿ ರದ್ಧತಿ ಬಗ್ಗೆ ಹೇಳಿದ್ದೇನು ಗೊತ್ತಾ?

ಬೀದರ್;ಚುನಾವಣೆ ಹಿನ್ನೆಲೆ ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ, ಸಿಎಂ ಬೊಮ್ಮಯಿ ನೇತೃತ್ವದ ಸರಕಾರ ಮುಸ್ಲಿಮರಿಗೆ 2b ಯಲ್ಲಿದ್ದ 4% ಮೀಸಲಾತಿ ರದ್ದತಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಗೊರಟಾ ಗ್ರಾಮ ಮತ್ತು ರಾಯಚೂರು ಜಿಲ್ಲೆಯ ಗಬ್ಬೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿತ್ತು.ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವೂ ಹೊಸ ಒಳಮೀಸಲಾತಿ ಜಾರಿಗೆ ತರುವ ಮೂಲಕ ಪರಿಶಿಷ್ಟ ಜಾತಿಗೆ ಆಗಿರುವ ಅನ್ಯಾಯವನ್ನು ದೂರ ಮಾಡಲು ಪ್ರಯತ್ನಿಸಿದೆ ಎಂದು ಹೇಳಿದರು.

2B ವರ್ಗವು ಮುಸ್ಲಿಮರಿಗೆ ಮಾತ್ರ ಇರುವುದರಿಂದ ಸಂವಿಧಾನಾತ್ಮಕವಾಗಿ ಸಮರ್ಥನೀಯವಲ್ಲ ಎಂದು ಬಿಜೆಪಿ ಸರ್ಕಾರವು ಅದನ್ನು ರದ್ದುಗೊಳಿಸಿತು ಮತ್ತು ರಾಜ್ಯದ ಎರಡು ಪ್ರಬಲ ಸಮುದಾಯಗಳಿಗೆ ಸಮಾನವಾಗಿ ನಾಲ್ಕು ಶೇಕಡಾ ಕೋಟಾವನ್ನು ಹಂಚಿತು.ಬಿಜೆಪಿ ಎಂದಿಗೂ ತುಷ್ಟೀಕರಣವನ್ನು ಮಾಡುವುದಿಲ್ಲ.ಇದರಿಂದ ಮೀಸಲಾತಿಯನ್ನು ಬದಲಾಯಿಸಲು ಅದು ನಿರ್ಧರಿಸಿದೆ ಎಂದು ಶಾ ಹೇಳಿದ್ದಾರೆ.

ಅಲ್ಪಸಂಖ್ಯಾತರಿಗೆ ನೀಡಲಾಗಿದ್ದ ಶೇ.4 ಮೀಸಲಾತಿಯನ್ನು ಬಿಜೆಪಿ ರದ್ದುಪಡಿಸಿ ಒಕ್ಕಲಿಗರಿಗೆ ಶೇ.2ರಷ್ಟು ಮತ್ತು ಲಿಂಗಾಯತರಿಗೆ ಶೇ.2ರಷ್ಟು ಮೀಸಲಾತಿ ನೀಡಿದೆ ಎಂದು ಶಾ ಹೇಳಿದರು.

ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ.ಈ ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣ ರಾಜಕಾರಣಕ್ಕಾಗಿ ಮೀಸಲಾತಿ ನೀಡಿತ್ತು ಎಂದು ಹೇಳಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ