ಅಮಿತ್ ಶಾ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಆರೋಪ; ಇಬ್ಬರು ವಿದ್ಯಾರ್ಥಿಗಳು ವಶಕ್ಕೆ

-ಇಮ್ರಾನ್ ಮತ್ತು ಜಿಬ್ರಾನ್ ಅವರನ್ನು ವಶಕ್ಕೆ ಪಡೆಯಲಾಗಿದೆ

ಬೆಂಗಳೂರು;ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ನೀಲಸಂದ್ರ ನಿವಾಸಿ ವಿದ್ಯಾರ್ಥಿಗಳಾದ ಇಮ್ರಾನ್ ಮತ್ತು ಜಿಬ್ರಾನ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ಅಮಿತ್ ಶಾ ಬೆಂಗಳೂರಿನ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ರವಿವಾರ ತಡರಾತ್ರಿ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ.

ವಿದ್ಯಾರ್ಥಿಗಳು ಅಮಿತ್ ಶಾ ಅವರ ಬೆಂಗಾವಲು ವಾಹನಗಳೊಂದಿಗೆ ಸಫೀನಾ ಪ್ಲಾಜಾದಿಂದ ಮಣಿಪಾಲ್ ಸೆಂಟರ್‍ ಗೆ ಹೇಗೋ ಹಠಾತ್ತನೆ ಮಧ್ಯೆ ಪ್ರವೇಶಿಸಿ ಪ್ರಯಾಣಿಸಿದ್ದಾರೆ. 300 ಮೀಟರ್‍ ವರೆಗೆ ಪೊಲೀಸರಿಂದ ತಪ್ಪುಸಿ ಪ್ರಯಾಣಿಸಿದ್ದರು.

ಪೊಲೀಸರು ಮಣಿಪಾಲ ಕೇಂದ್ರದಲ್ಲಿ ಅವರನ್ನು ತಡೆದು ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದು ನಂತರ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ವಿದ್ಯಾರ್ಥಿಗಳು ಯಾವುದೇ ಅಪರಾಧ ಹಿನ್ನೆಲೆ ಅಥವಾ ಯಾವುದೇ ಕೆಟ್ಟ ಉದ್ದೇಶವನ್ನು ಹೊಂದಿಲ್ಲ.ಪೊಲೀಸರನ್ನು ಕಂಡು ಗಾಬರಿಗೊಂಡು ತೆರಳಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಭಾರತೀನಗರ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಐಪಿಸಿ ಸೆಕ್ಷನ್ 353 ರ ಅಡಿಯಲ್ಲಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಮತ್ತು 279 ಅಜಾಗರೂಕ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್