ಕಾಂಗ್ರೆಸ್ ಸರಕಾರ ಜಾರಿಗೆ ತಂದ ಅನ್ನಭಾಗ್ಯ ಯೋಜನೆ ಕುರಿತು ಶ್ಲಾಘನೆ ವ್ಯಕ್ತಪಡಿಸಿದ ಕರಾವಳಿಯ ಬಿಜೆಪಿ ಶಾಸಕ

ಬೆಂಗಳೂರು;ರಾಜ್ಯ ಕಾಂಗ್ರೆಸ್ ಸರಕಾರದ ಅನ್ನಭಾಗ್ಯ ಯೋಜನೆ ಕುರಿತು ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಸೋಮವಾರ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ನಾನು ಬಿಜೆಪಿಯವನಾದರೂ ಬಡವರ ಮನೆಗೆ ಅಕ್ಕಿಯನ್ನು ಮುಟ್ಟಿಸುವ ಯೋಜನೆಯನ್ನು ಅಭಿನಂದಿಸುತ್ತೇನೆ.ಅನ್ನಭಾಗ್ಯ ಯೋಜನೆ ರೂಪಿಸಿದವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಇದನ್ನು ಯಾವುದೇ ಸರಕಾರ ಜಾರಿ ಮಾಡಿರಲಿ ಬಡವನ ಮನೆಗೆ ಅದು ಮುಟ್ಟಿದೆ.ಬಡತನವನ್ನು ಅನುಭವಿಸಿದವನಿಗಷ್ಟೇ ಅದರ ಮೌಲ್ಯ ಗೊತ್ತಾಗುತ್ತೆ ಎಂದು ಹೇಳಿದರು.

ಬಡವರ ಮನೆಯ ಒಲೆ ನಿರಂತರ ಉರಿಯುವಂತೆ ಮಾಡುವ ನಿರ್ಧಾರ ಕೈಗೊಂಡ ಯಾವುದೇ ಸರ್ಕಾರವಿರಲಿ ನಾನು ಮುಕ್ತಕಂಠದಿಂದ ಶ್ಲಾಘಿಸುತ್ತೇನೆ.

ಆದರೆ ಬಡತನ ಎನ್ನುವುದು ಅಣಕದ ವಿಚಾರವಾಗ ಕೂಡದು. ದುಡಿಯುವ ಕೈಗಳಿಗೆ ಕೆಲಸ ಒದಗಿಸಿದರೆ ಬಡತನ ಎನ್ನುವುದಕ್ಕೆ ತಿಲಾಂಜಲಿ ಹಾಡಬಹುದು. ಸರಕಾರ ಈ ನಿಟ್ಟಿನಲ್ಲಿ ಗಂಭೀರವಾಗಿ ಯೋಚಿಸಬೇಕು ಎಂದು ಬೈಂದೂರು ಶಾಸಕರು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್