ಮಾಜಿ ಐಪಿಎಸ್ ಅಣ್ಣಾಮಲೈ ರಾಜ್ಯಸಭೆಗೆ? ಏನಿದು ಬೆಳವಣಿಗೆ?

ರಾಜಸ್ಥಾನ;ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಸಭೆಗೆ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜಸ್ಥಾನದಲ್ಲಿ ಬಿಜೆಪಿ 73 ಶಾಸಕರನ್ನು ಹೊಂದಿದೆ. ರಾಜಸ್ಥಾನದ 10 ರಾಜ್ಯಸಭಾ ಸ್ಥಾನಗಳ ಪೈಕಿ 4 ಸ್ಥಾನಗಳು ಬಿಜೆಪಿ ಪಾಲಾಗಿವೆ. ಬಿಜೆಪಿಯ ಇಬ್ಬರು ರಾಜ್ಯಸಭಾ ಸದಸ್ಯರ ಅವಧಿ ಮುಂದಿನ ವರ್ಷ ಮಾರ್ಚ್ ನಲ್ಲಿ ಕೊನೆಗೊಳ್ಳಲಿದೆ. ಈ ಖಾಲಿ ಸ್ಥಾನಗಳಲ್ಲಿ ಅಣ್ಣಾಮಲೈ ಬಿಜೆಪಿಯಿಂದ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಅಣ್ಣಾಮಲೈ ಅವರು ಕರ್ನಾಟಕ ಕೇಡರ್ ನ ಐಪಿಎಸ್ ಅಧಿಕಾರಿಯಾಗಿದ್ದು, ಸೇವೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರು.ಬಳಿಕ ಬಿಜೆಪಿ ಅವರಿಗೆ ತಮಿಳುನಾಡು ಬಿಜೆಪಿಯ ಸಾರಥ್ಯ ನೀಡಿತ್ತು.

ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯ ಸಹ ಉಸ್ತುವಾರಿಯಾಗಿ ಕೂಡ ಕೆಲಸ ಮಾಡಿದ್ದರು.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ