ಮಲೇಷ್ಯಾಗೆ ತೆರಳಿದ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕರ್ ಮುಸ್ಲಿಯಾರ್

ಕೋಝಿಕ್ಕೋಡ್: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರು ಮಲೇಷ್ಯಾಗೆ ತೆರಳಿ ಅಲ್ಲಿನ ಪ್ರಧಾನ ಮಂತ್ರಿ ಅನ್ವರ್ ಇಬ್ರಾಹಿಂ ಅವರನ್ನು ಭೇಟಿ ಮಾಡಿದ್ದಾರೆ.

ಮಲೇಷ್ಯಾ ಪ್ರಧಾನಿಯ ವಿಶೇಷ ಆಹ್ವಾನದ ಮೇರೆಗೆ ಎ.ಪಿ ಅಬೂಬಕರ್ ಮುಸ್ಲಿಯಾರ್ ಮಲೇಷ್ಯಾ ತಲುಪಿದ್ದಾರೆ.

ಕೋಝಿಕ್ಕೋಡ್ ವಿಮಾನ ನಿಲ್ದಾಣದಿಂದ ತೆರಳಿ ಮುಂಜಾನೆ 3 ಗಂಟೆಗೆ ಕೌಲಾಲಂಪುರ ವಿಮಾನ ನಿಲ್ದಾಣಕ್ಕೆ ತಲುಪಿದ ಕಾಂತಪುರಂ ಅವರನ್ನು ಸರ್ಕಾರಿ ಪ್ರತಿನಿಧಿಗಳು ಸ್ವಾಗತಿಸಿದ್ದಾರೆ.

ಅವರು ಮಲೇಷ್ಯಾದಲ್ಲಿ ನಡೆಯಲಿರುವ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಜುಲೈ 22 ಶನಿವಾರ ಅವರು ಸಹೀಹುಲ್ ಬುಖಾರಿ ವಿದ್ವಾಂಸರ ಸಮ್ಮೇಳನದಲ್ಲಿ ಮುಖ್ಯ ಭಾಷಣ ಮಾಡಲಿದ್ದಾರೆ. ಆ ಕಾರ್ಯಕ್ರಮವನ್ನು ಅಲ್ಲಿನ ಪ್ರಧಾನಿ ಅನ್ವರ್ ಇಬ್ರಾಹಿಂ ಉದ್ಘಾಟಿಸಲಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್