ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಗೆ ಮಲೇಷ್ಯಾದಲ್ಲಿ ಜಾಗತಿಕ ವಿದ್ವಾಂಸರಿಗೆ ನೀಡುವ ಅತ್ಯುನ್ನತ ಪ್ರಶಸ್ತಿ ಪ್ರಧಾನ

ನವದೆಹಲಿ;ಜಾಗತಿಕ ಇಸ್ಲಾಮಿಕ್ ವಿದ್ವಾಂಸರಿಗೆ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿ ಹಿಜ್ರಾ ಪುರಸ್ಕಾರವನ್ನು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರಿಗೆ ನೀಡಿ ಗೌರವಿಸಲಾಗಿದೆ.

ಮಲೇಷ್ಯಾದ ರಾಜ ಅಲ್ ಸುಲ್ತಾನ್ ಅಬ್ದುಲ್ಲಾಹ್ ಅಹ್ಮದ್ ಶಾ ಅವರು ಬುಧವಾರ ಕೌಲಾಲಂಪುರದ ವರ್ಲ್ಡ್ ಟ್ರೇಡ್ ಸೆಂಟರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

ಪ್ರತಿವರ್ಷ ಮೊಹರಂ 1ನೇ ದಿನ ಈ ಪ್ರಶಸ್ತಿ ನೀಡಲಾಗುತ್ತದೆ.ಪ್ರತಿಷ್ಠಿತ ಪ್ರಶಸ್ತಿಗೆ ಪಡೆದ ಪ್ರಪ್ರಥಮ ಭಾರತೀಯ ಎಂಬ ಹೆಗ್ಗಳಿಕೆಗೆ ಕಾಂತಪುರಂ ಎ ಪಿ ಉಸ್ತಾದ್ ಪಾತ್ರರಾಗಿದ್ದಾರೆ.

ಪ್ರಧಾನಿ ಅನ್ವರ್ ಇಬ್ರಾಹಿಂ, ಧಾರ್ಮಿಕ ಸಚಿವ ಮ್ಮದ್ ನಹೀಮ್ ಬಿನ್ ಮುಕ್ತಾರ್ ಜೊತೆಗೆ ಮಲೇಷ್ಯಾ ಸರಕಾರದ ಪ್ರಮುಖ ಸಚಿವರು ಸಂದರ್ಭದಲ್ಲಿ ಹಾಜರಿದ್ದರು.

ಪ್ರಧಾನ ಮಂತ್ರಿ ಅನ್ವರ್ ಇಬ್ರಾಹಿಂ ಅವರ ವಿಶೇಷ ಆಹ್ವಾನದ ಮೇರೆಗೆ 5 ದಿನಗಳ ಪ್ರವಾಸಕ್ಕಾಗಿ ಎ.ಪಿ ಅಬೂಬಕರ್ ಮುಸ್ಲಿಯಾರ್ ಮಲೇಷ್ಯಾ ತೆರಳಿದ್ದರು.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು