ಎಪಿಜೆ ಅಬ್ದುಲ್ ಕಲಾಂ ಬಗ್ಗೆ ವಿವಾದಾತ್ಮಕ ಹೇಳಿಕೆ; ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ಗಾಝಿಯಾಬಾದ್: ವಿವಾದಾತ್ಮಕ ಅರ್ಚಕ ಯತಿ ನರಸಿಂಹಾನಂದ ವಿರುದ್ಧ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಬಗ್ಗೆ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

ಶುಕ್ರವಾರ ರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವಿಡಿಯೋ ಕ್ಲಿಪ್ ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.

16 ಸೆಕೆಂಡ್‌ಗಳ ವೀಡಿಯೊ ಕ್ಲಿಪ್‌ನಲ್ಲಿ ಯತಿ ಅವರು ಮಾಜಿ ರಾಷ್ಟ್ರಪತಿಗಳ ಬಗ್ಗೆ ಅಸಹ್ಯಕರ ಹೇಳಿಕೆಗಳನ್ನು ನೀಡಿದ್ದಾರೆ. ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಾರೆ. ಇದು ದ್ವೇಷವನ್ನು ಉಂಟುಮಾಡಿ, ಕೋಮು ಸೌಹಾರ್ದತೆಗೆ ಧಕ್ಕೆ ತರಬಹುದು ಎಂದು ಮಿಶ್ರಾ ಹೇಳಿದ್ದಾರೆ.

ವಿಡಿಯೋ ಆಧರಿಸಿ, ಸಬ್ ಇನ್ಸ್‌ಪೆಕ್ಟರ್ ಪ್ರಶಾಂತ್ ಕುಮಾರ್ ಗೌತಮ್ ಅವರು ವೇವ್ ಸಿಟಿ ಪೊಲೀಸ್ ಠಾಣೆಯಲ್ಲಿ ಯತಿ ವಿರುದ್ಧ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್