ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು,ಮುಂದಿನ ನಾಲ್ಕು ದಿನಗಳ ಕಾಲ ಸಮುದ್ರ ಪ್ರಕ್ಷುಬ್ಧವಾಗಿರಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾಮ್ ಈಗಾಗಲೇ ತಿಳಿಸಿದ್ದಾರೆ.

ಚಂಡಮಾರುತದಿಂದ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಬರಲಿದೆ.ಭಾರೀ ಬಿರುಗಾಳಿ ಮಳೆಯೂ ಸುರಿಯುವ ಸಾಧ್ಯತೆ ಇದೆ.ಜನರು ಸಮುದ್ರ, ನದಿ ತೀರ ಪ್ರದೇಶಗಳಲ್ಲಿ ನೀರಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಭಾರೀ ಗಾಳಿ ಮಳೆ ಸಾದ್ಯತೆ ಹಿನ್ನೆಲೆ ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಕೆಳಗೆ ನಿಲ್ಲದಂತೆ ಎಚ್ಚರಿಸಲಾಗಿದೆ. ನೆರೆ ಬರುವ ಸಾಧ್ಯತೆ ಇರುವ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸಿದ್ಧವಾಗಿರಬೇಕು ಎಂದು ಸೂಚಿಸಲಾಗಿದೆ.

ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ವಿಪತ್ತನ್ನು ಎದುರಿಸಲು ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್