ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ಕೊಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ:ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಾಕಾರಿಯಾಗಿ ಸುಳ್ಳು ಹೇಳಿಕೆ ಕೊಟ್ಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿಯ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕ ದೂರು ನೀಡಿದೆ.

ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಮೇ.22ರಂದು ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಶಾಸಕ ಪೂಂಜಾ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಮತ್ತು ಪುತ್ತೂರು ಠಾಣೆಯಲ್ಲಿ ಕೂಡ ದೂರು ನೀಡಲಾಗಿದೆ.

ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಹೇಳಿಕೆ ನೀಡಿದ್ದು, ಇದು ಸರಿಯಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರು ನೀಡುವ ವೇಳೆ ಶ್ರೀಮತಿ ನಮಿತ ಕೆ ಪೂಜಾರಿ ಉಪಾಧ್ಯಕ್ಷರಾದ ಶ್ರೀಮತಿ ಮಮತಾ ,ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com