ಪುತ್ತೂರು;ಬಿಜೆಪಿಯಿಂದ ಬಂಡಾಯವೆದ್ದು ಪಕ್ಷಾಂತರವಾಗಿ ಸ್ಪರ್ಧೆಗಿಳಿದಿರುವ ಪುತ್ತೂರಿನ ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಹಿಂಪಡೆಯುತ್ತಾರೆ ಎಂಬ ಬಗೆಗಿನ ಸುದ್ದಿಗಳಿಗೆ ಸ್ವತಃ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ.
ನಾನು ಯಾವುದೇ ಕಾರಣಕ್ಕೆ ನಾಮಪತ್ರ ಹಿಂಪಡೆಯುವುದಿಲ್ಲ .ಜನರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು.ನನ್ನ ಸ್ಪರ್ಧೆಯಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪುತ್ತಿಲ ನಾಮಪತ್ರ ಹಿಂತೆಗೆದುಕೊಳ್ಳುತ್ತಾರೆ ಎಂದು ಹೇಳಿರುವುದು ಸುಳ್ಳಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಿ ಪುತ್ತಿಲ ಅವರು ಬಿಜೆಪಿಗೆ ಉತ್ತರವನ್ನು ಕೊಡಲು ಮುಂದಾಗಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗೆ ಪ್ರಬಲ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿತ್ತು. ಅಚ್ಚರಿ ಎಂಬಂತೆ ಆಶಾ ತಿಮ್ಮಪ್ಪ ಅವರಿಗೆ ಟಿಕೆಟ್ ಕೊಡಲಾಗಿತ್ತು.ಇದರಿಂದ ಪುತ್ತಿಲ ಅವರು ಬೆಂಬಲಿಗರ ಜೊತೆ ಸಭೆ ನಡೆಸಿ ಪಕ್ಷೇತರವಾಗಿ ಸ್ಪರ್ಧೆಯ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.
ಸಾವಿರಾರು ಮಂದಿ ಬೆಂಂಬಲಿಗರು, ಅಭಿಮಾನಿಗಳ ಜೊತೆ ಸೇರಿ ನಾಮಪತ್ತ ಸಲ್ಲಿಕೆ ಮಾಡಿದ್ದಾರೆ.ಈ ಮಧ್ಯೆ ಅವರ ಮನವೊಲಿಕೆ ಪ್ರಯತ್ನ ನಡೆದಿದೆ ಎನ್ನಲಾಗಿದ್ದು ಅವರು ಅದಕ್ಕೆ ಒಪ್ಪಿಗೆ ಸೂಚಿಸದೆ ಸ್ಪರ್ಧೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.