ಠೇವಣಿ ಕಳೆದುಕೊಂಡು ಸೋತವರು ವಿಪಕ್ಷ ನಾಯಕ; ಅಶೋಕ್ ನೇಮಕದ ಬಗ್ಗೆ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ವಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರ ನೇಮಕಾತಿ ಬಗ್ಗೆ ಟೀಕಿಸಿದ ಕಾಂಗ್ರೆಸ್, ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ವ್ಯಂಗ್ಯ ಮಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಕಾಂಗ್ರೆಸ್, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಗೆ ಆಯ್ಕೆಯಾಗಿದ್ದು ಬಿಜೆಪಿ ನಾಯಕರು ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ ಎಂದು ಅಣಕಿಸಿದೆ.

ಇನ್ನು ರಾಜ್ಯಕ್ಕೆ ವಿರೋಧ ಪಕ್ಷದ ನಾಯಕನನ್ನು ಕೊಡಿ ಎಂದರೆ ವಿರೋಧ ಪಕ್ಷವನ್ನೇ ವಿರೋಧಿಸುವ ನಾಯಕರನ್ನು ಕೊಡುತ್ತಿದೆ.ಯಾವುದೇ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೂ ಕಿತ್ತಾಡದಷ್ಟು ಬಿಜೆಪಿಯಲ್ಲಿ ಕಿತ್ತಾಟ ಜೋರಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರು ಸೇರುವ ಜಾಗದಲ್ಲಿ ಕೋಲು, ದೊಣ್ಣೆ ಹಾಗೂ ಇತರೆ ಯಾವುದೇ ಆಯುಧವಾಗಿ ಬಳಸಬಹುದಾದ ವಸ್ತುಗಳನ್ನು ದೊರಕದಂತೆ ನೋಡಕೊಳ್ಳಬೇಕು. ಅಕಸ್ಮಾತ್ ಹೊಡೆದಾಡಿಕೊಂಡರೆ ಆಸ್ಪತ್ರೆಗಳಲ್ಲಿ ನೂಕುನುಗ್ಗಲಾಗುವ ಸಾಧ್ಯತೆ ಇರುತ್ತದೆ ಎಂದು ಲೇವಡಿ ಮಾಡಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು