ತಂದೆಯ ಸಾವಿನ ಸುದ್ದಿ ಕೇಳಿ 11 ವರ್ಷದ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ

ಮಧ್ಯಪ್ರದೇಶ;ತಂದೆ ಹೃದಯಾಘಾತದಿಂದ ಸಾವಿಗೀಡಾದ ಸುದ್ದಿ ತಿಳಿದು ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಬರ್ಖೇಡ ಜಾಗಿರ್ ಎಂಬ ಗ್ರಾಮದಲ್ಲಿ ವ್ಯಕ್ತಿಯೊಬ್ಬರು
ಕುಸಿದು ಬಿದ್ದಿದ್ದರು.ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಆದರೆ ಈ ವೇಳೆ ಅವರು ಮೃತಪಟ್ಟಿದ್ದರು.

ಸಾವಿನ ವಿಚಾರವನ್ನು ಆಸ್ಪತ್ರೆಯಲ್ಲಿದ್ದವರು ಮನೆಗೆ ಕರೆ ಮಾಡಿ ತಿಳಿಸಿದ್ದಾರೆ.ಇದನ್ನು ಕೇಳಿಕೊಂಡು‌ ಮನೆಯಿಂದ ಹೊರ ಹೋಗಿದ್ದ 11 ವರ್ಷದ ಮಗಳು ನಾಪತ್ತೆಯಾಗಿದ್ದಳು. ಬಳಿಕ ಹುಡುಕಾಟ ನಡೆಸಿದಾಗ ಪಕ್ಕದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಟಾಪ್ ನ್ಯೂಸ್