ಉಳ್ಳಾಲ; ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಉಳ್ಳಾಲ:ಯುವತಿಯೋರ್ವಳು ಡೆತ್ ನೋಟು ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಚಿತ್ರಾಂಜಲಿ ಬಳಿ ನಡೆದಿದೆ.

ಮೂಲತಃ ಫರಂಗಿಪೇಟೆಯ‌ ನಿವಾಸಿ ಸದ್ಯ ಕುಂಪಲ ಚಿತ್ರಾಂಜಲಿ ನಗರದಲ್ಲಿ ವಾಸಿಸುತ್ತಿದ್ದ ಅಶ್ವಿನಿ ಬಂಗೇರ(25)ಆತ್ಮಹತ್ಯೆ ಮಾಡಿಕೊಂಡ ಯುವತಿ.

ವಿದೇಶದಲ್ಲಿ ಕೆಲಸದಲ್ಲಿದ್ದ ಅಶ್ವಿನಿ ಕುಂಪಲದಲ್ಲಿ ನೂತನ ಮನೆ ಖರೀದಿಸಿದ್ದರು.ಐದು ದಿನದ ಮೊದಲು ಅಶ್ವಿ‌ನಿ ಅದ್ಧೂರಿ ಗೃಹ ಪ್ರವೇಶಗೈದಿದ್ದರು.

ಇದೀಗ ಗೃಹ ಪ್ರವೇಶ ನಡೆದ ಐದೇ ದಿನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, 24 ಪುಟಗಳ ಡೆತ್ ನೋಟು ಪತ್ತೆಯಾಗಿದೆ ಎನ್ನಲಾಗಿದೆ.

ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ

ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ.ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಅಶ್ವಿನಿ ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ,ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ.ಮಗಳನ್ನು ಕಳೆದುಕೊಂಡ ತಾಯಿಯ ರೋಧನ ಮುಗಿಲು ಮುಟ್ಟಿದೆ.

ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.ಮೃತದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಬೇಕಿದೆ.

ಟಾಪ್ ನ್ಯೂಸ್