ಹೃದಯಾಘಾತದಿಂದ 23 ವರ್ಷದ ಯುವಕ ಮೃತ್ಯು

ದಾಂಡೇಲಿ; ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಗಾಂಧಿನಗರದ ಆಶ್ರಯ ಕಾಲೋನಿಯಲ್ಲಿ ನಡೆದಿದೆ.

ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಅಸ್ಲಾಂ ಖಾಸೀಂ ಸಾಬ್(23)ಮೃತರು.

ಚಿಕ್ಕಂದಿನಿಂದಲೇ ತಂದೆ, ತಾಯಿಯನ್ನು ಕಳೆದುಕೊಂಡಿದ್ದ ಈತ ತನ್ನ ಮಾವ ದಾದಾಪೀರ್ ನದೀಮುಲ್ಲಾ ಅವರ ಗಾಂಧಿನಗರದ ಆಶ್ರಯ ಕಾಲೋನಿಯಲ್ಲಿರುವ ಮನೆಯಲ್ಲಿ ವಾಸವಿದ್ದರು.

ಇಂದು ಬೆಳಿಗ್ಗೆ ನದೀಮುಲ್ಲಾಗೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಗೆ ಕೆಲಸಕ್ಕೆಂದು ತೆರಳುತ್ತಿದ್ದ ಸಮಯದಲ್ಲಿ ಮನೆಯಲ್ಲಿಯೇ ಎದೆ ನೋವು ಕಾಣಿಸಿಕೊಂಡಿದೆ.ಕೂಡಲೇ ಅವರಿಗೆ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಈ ವೇಳೆ ಅವರು ಮೃತಪಟ್ಟಿದ್ದರು.

ಟಾಪ್ ನ್ಯೂಸ್