ದಿಸ್ಪುರ್:ತನ್ನ ಪತಿಯನ್ನು ಬಂಧಿಸುತ್ತಾರೆಂದು ಹೆದರಿ ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದಕ್ಷಿಣ ಸಾಲ್ಮರ ಪೊಲೀಸ್ ಠಾಣಾ ವ್ಯಾಪ್ತಿಯ ಕಮರ್ ಪದ ಗ್ರಾಮದ ನಿವಾಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರು.
ಅಸ್ಸಾಂ ಸರ್ಕಾರ ಬಾಲ್ಯವಿವಾಹ ವಿರುದ್ಧ ಕಾರ್ಯಾಚರಣೆ ನಡೆಸಿ ಸಾವಿರಾರು ಮಂದಿಯನ್ನು ಬಂಧಿಸಿದ್ದರು.ಈ ಹಿನ್ನೆಲೆಯಲ್ಲಿ ತನ್ನ ಪತಿಯನ್ನು ಬಂಧಿಸುತ್ತಾರೆ ಎಂದು ಹೆದರಿ 3 ತಿಂಗಳ ಹಿಂದೆಯಷ್ಟೇ ಮದುವೆಯಾದ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮೃತದೇಹವನ್ನು ಇದೀಗ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.