ಮದರಸಾಗಳ ಸಂಖ್ಯೆಯನ್ನು ಕಡಿತಗೊಳಿಸಲು ಮುಂದಾದ ಸರಕಾರ

ಅಸ್ಸಾಂ;ರಾಜ್ಯದಲ್ಲಿರುವ ಮದರಸಾಗಳ ಸಂಖ್ಯೆಯನ್ನು ಕಡಿಮೆ ಮಾಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ರಾಜ್ಯದಲ್ಲಿನ ಮದರಸಾಗಳ ಸಂಖ್ಯೆಯನ್ನು ಕಡಿತ ಮಾಡಬೇಕಿದೆ.ಮದರಸಾಗಳಲ್ಲಿ ಸಾಮಾನ್ಯ ಶಿಕ್ಷಣವನ್ನು ಜಾರಿಗೆ ತಂದು ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಇದಕ್ಕೆ ಅಲ್ಪಸಂಖ್ಯಾತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಜೊತೆ ಸೇರಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್