ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರೂ ಡಿಸ್ಚಾರ್ಜ್; ಅನಿಲ ದುರಂತದ ಸಂತ್ರಸ್ತರು ಹೇಳುವುದೇನು?

ತಮಿಳುನಾಡಿನ ಎನ್ನೂರಿನ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ (ಸಿಐಎಲ್)ನಲ್ಲಿ ಡಿಸೆಂಬರ್ 26ರ ರಾತ್ರಿ ಅಮೋನಿಯಾ ಗ್ಯಾಸ್ ಸೋರಿಕೆಯಾಗಿತ್ತು. ಸುಮಾರು 44 ಜನರು ಉಸಿರಾಟದ ತೊಂದರೆ, ವಾಕರಿಕೆ ಮತ್ತು ಮೂರ್ಛೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ಸಂತ್ರಸ್ತರು ಇದೀಗ ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳಲು ಕೂಡ ಸಮಯಾವಕಾಶ ನೀಡದೆ ತಮ್ಮನ್ನು ಡಿಸ್ಚಾರ್ಜ್‌ ಮಾಡಿ ಕಳುಹಿಸಿದ್ದಾರೆ. ನಾವು ಎಷ್ಟೇ ವಿನಂತಿ ಮಾಡಿದರೂ ಸ್ಕ್ಯಾನ್,ಎಕ್ಸ್-ರೇ ಮತ್ತು ಇತರ ಯಾವುದೇ ದಾಖೆಯನ್ನು ಹಸ್ತಾಂತರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅನಿಲ ಸೋರಿಕೆ ಸಂಭವಿಸಿದಾಗ … Read more

ಯುವತಿಯನ್ನು ವಿವಾಹವಾದ ಯುವತಿ; ಅಪರೂಪದ ಘಟನೆ

ಲಕ್ನೋ:ಪರಸ್ಪರ ಪ್ರೀತಿಸುತ್ತಿದ್ದ‌ ಸಲಿಂಗಿ ಜೋಡಿ ಸಾಂಪ್ರದಾಯಿಕವಾಗಿ ವಿವಾಹವಾದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಜಯಶ್ರೀ ರಾಹುಲ್ (28) ಮತ್ತು ರಾಖಿ ದಾಸ್ (23) ಮದುವೆಯಾದ ಜೋಡಿ. ಜಯಶ್ರೀ ರಾಹುಲ್‌ ಹಾಗೂ ರಾಖಿ ದಾಸ್ ಡಿಯೋರಿಯಾದಲ್ಲಿ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಈ ಜೋಡಿಗೆ ಕೆಲವು ದಿನಗಳ ಹಿಂದೆ ದೀರ್ಗೇಶ್ವರನಾಥ ದೇವಸ್ಥಾನದಲ್ಲಿ ಮದುವೆಗೆ ಅನುಮತಿಯನ್ನು ಕೋರಲಾಗಿತ್ತು. ಆದರೆ ದೇವಸ್ಥಾನದಲ್ಲಿ ಅನುಮತಿ ನಿರಾಕರಿಸಿದ್ದರು. ಇದಾದ ಬಳಿಕ ಆರ್ಕೆಸ್ಟ್ರಾ ತಂಡದ ಮಾಲೀಕ ಮನ್ನಾ ಪಾಲ್‌ ಮದುವೆಗೆ ನೋಟರೈಸ್ ಮಾಡಿದ ಅಫಿಡವಿಟ್ … Read more

ಮಗುವಿನ ಕೊಲೆ ಕೇಸ್; ಸುಚನಾ ಸೇಠ್ ತಂಗಿದ್ದ ಹೊಟೇಲ್ ನಲ್ಲಿ ಕೆಮ್ಮಿನ ಸಿರಫ್ ಬಾಟಲಿಗಳು ಪತ್ತೆ

ಗೋವಾದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ನಿನ್ನೆ ಬ್ಯಾಗ್‌ನಲ್ಲಿ ಮಗನ ಮೃತದೇಹವನ್ನು ಕಾರಿನಲ್ಲಿ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೃತ್ಯ ನಡೆದಿದೆ ಎನ್ನಲಾದ ಕೊಠಡಿಯಲ್ಲಿ ಕೆಮ್ಮಿನ ಸಿರಪ್‌ನ ಎರಡು ಖಾಲಿ ಬಾಟಲಿಗಳು ಸಿಕ್ಕಿದೆ. ಮಗುವಿಗೆ ಓವರ್‌ ಡೋಸ್‌ ಕೊಟ್ಟು ಕೊಲೆ ಮಾಡಿರುವ ಶಂಕೆ ಇದ್ದು ಇದೊಂದು ಪೂರ್ವಯೋಜಿತ ಕೃತ್ಯದಂತೆ ತೋರುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೋರ್ವರು ಹೇಳಿದ್ದಾರೆ. ಸುಚನಾ ಸೇಠ್ ಬಂಧನದ ನಂತರ ಮಂಗಳವಾರ ಆಕೆಯನ್ನು ಗೋವಾದ … Read more

ಕಾಸರಗೋಡು; ತಾಯಿಯ ಎದೆ ಹಾಲು ಕುಡಿಯುವಾಗ ಉಸಿರು ಗಟ್ಟಿ ಮಗು ಮೃತ್ಯು

ಕುಂಬಳೆ: ತಾಯಿಯ ಎದೆ ಹಾಲು ಕುಡಿಯುವಾಗ ಉಸಿರುಗಟ್ಟಿ ಮೂರು ತಿಂಗಳು ಪ್ರಾಯದ ಮಗು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ. ಮೂಲತಃ ಈಶ್ವರ ಮಂಗಲ ನಿವಾಸಿ, ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ , ಮೂರು ತಿಂಗಳ ಮಗು ಅಯಿಶಾ ಮೆಹ್ರಾ ಮೃತಪಟ್ಟಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ರಾತ್ರಿ ಎಷ್ಟು ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾಗ ಕುಂಬಳೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅದಾಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮಗವನ್ನು ಕೊಂದ ತಾಯಿ; ರಾಜ್ಯದಲ್ಲಿ ಸಂಚಲನ ಮೂಡಿಸಿದ ಹೈ ಪ್ರೊಫೈಲ್ ಕೇಸ್ ನ ಡಿಟೇಲ್ಸ್..

ಬೆಂಗಳೂರು:‌ ಮಹಿಳೆಯೋರ್ವಳು ತನ್ನ ನಾಲ್ಕು ವರ್ಷದ ಮಗುವನ್ನು ಕೊಂದು ಶೂಟ್ ಕೇಸ್ ನಲ್ಲಿ ಹಾಕಿ ಗೋವಾದಿಂದ ಬೆಂಗಳೂರಿಗೆ ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಹೈ ಪ್ರೊಫೈಲ್ ಉದ್ಯಮಿ ಮತ್ತು ಕಂಪೆನಿಯೊಂದರ ಸಿಇಒ ಸುಚನಾ ಸೇತ್(39) ಅವರನ್ನು ಕರ್ನಾಟಕದ ಚಿತ್ರದುರ್ಗದಲ್ಲಿ ಬಂಧಿಸಲಾಗಿದ್ದು, ಗೋವಾ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಗೋವಾಕ್ಕೆ ಬಂದಿದ್ದ ಸುಚನಾ ಸೇತ್ ಉತ್ತರ ಗೋವಾದ ಕ್ಯಾಂಡೋಲಿಂನಲ್ಲಿರುವ ಹೊಟೇಲೊಂದರಲ್ಲಿ ಜನವರಿ 6 ರಂದು ತಡರಾತ್ರಿ ತನ್ನ ನಾಲ್ಕು … Read more

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು ಏನೆಲ್ಲಾ ಹೇಳಿದ್ರು?

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ನಿನ್ನೆ ಸುಪ್ರೀಂಕೋರ್ಟ್‌ ರದ್ದುಗೊಳಿಸಿತ್ತು. ಈ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು ಪ್ರತಿಕ್ರಿಯಿಸಿದ್ದು, ತೀರ್ಪು ಸಮಾಧಾನ ತಂದಿದೆ, ನನಗೆ ಈಗ ಮತ್ತೆ ಉಸಿರಾಡಬಹುದು ಎಂದು ಹೇಳಿದ್ದಾರೆ. ತಮ್ಮ ವಕೀಲೆ ಶೋಭಾ ಗುಪ್ತಾ ಮೂಲಕ ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇಂದು ನನಗೆ ನಿಜವಾಗಿಯೂ ಹೊಸ ವರ್ಷ, … Read more

ಕಾಸರಗೋಡು; ಪಂಚಾಯತ್ ಸದಸ್ಯೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಪಂಚಾಯತ್ ಸದಸ್ಯೆಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೊಗ್ರಾಲ್ ಪುತ್ತೂರು ಸಮೀಪ ನಡೆದಿದೆ. ಮೊಗ್ರಾಲ್ ಪುತ್ತೂರು ಪಂಚಾಯತ್ ಮೂರನೇ ವಾರ್ಡ್ ಸದಸ್ಯೆ ಪುಷ್ಪಾ (45)ಮೃತಪಟ್ಟವರು. ಸೋಮವಾರ ಮಧ್ಯಾಹ್ನ ಪರಿಸರ ಪುಷ್ಪಾ ಬಿದ್ದುಕೊಂಡಿರುವುದನ್ನು ಸ್ಥಳೀಯ ನಿವಾಸಿಯೋರ್ವರು ಗಮನಿಸಿದ್ದು, ಕೂಡಲೇ ಸ್ಥಳೀಯರ ನೆರವಿನಿಂದ ಆಟೋ ರಿಕ್ಷಾ ವೊಂದರಲ್ಲಿ ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆದರೆ ಅವರು ಮೃತಪಟ್ಟಿದ್ದರು. ಪುಷ್ಪಾ ಅವರು ಸಂಬಂಧಿಕರ ಮನೆಗೆಂದು ತೆರಳಿದ್ದರು ಎನ್ನಲಾಗಿದೆ.ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ಲೆಕ್ಸ್ ಕಟ್ಟುವಾಗ ವಿದ್ಯುತ್ ತಗುಲಿ ಮೂವರು ಯುವಕರು ಮೃತ್ಯು

ಗದಗ:ನಟ ಯಶ್ ಅವರ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಯುವಕರು ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ‌. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ. ಈ ಕುರಿತು ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್, ವಿದ್ಯುತ್ ಸ್ಪರ್ಶದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ … Read more

ಅತ್ಯಾಚಾರಿಗಳಿಗೆ ಮತ್ತೆ ಜೈಲು; ಸುಪ್ರೀಂ ತೀರ್ಪಿನ ಬಳಿಕ ಬಿಲ್ಕೀಸ್ ಕುಟುಂಬ ಹೇಳುವುದೇನು ಗೊತ್ತಾ?

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ಇಂದು ಸುಪ್ರೀಂಕೋರ್ಟ್‌ ರದ್ದುಗೊಳಿಸಿ ತೀರ್ಪು ನೀಡಿದೆ‌. ಈ ಐತಿಹಾಸಿಕ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು ಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ವಿಜಯದ ಸಂತಸದಲ್ಲಿಲ್ಲ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿದೆ. ಕ್ಷಮಾಧಾನ ನೀಡುವ ವಿಷಯದಲ್ಲಿ ಗುಜರಾತ್ ಸರ್ಕಾರದ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದರಿಂದ ಕುಟುಂಬಕ್ಕೆ ನಿರಾಳವಾಗಿದೆ … Read more

ಪುತ್ತೂರು; ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16) ಮೃತ ಯುವತಿ.ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದರು ಎನ್ನಲಾಗಿದೆ. ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು,ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.