ಚಿಕ್ಕಬಳ್ಳಾಪುರ;ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಆಟೋ ಚಲಾವಣೆ ಮಾಡಿ ಸುದ್ದಿಯಾಗಿದ್ದಾರೆ.
ಆಟೋ ಚಾಲಕರಿಗೆ 5 ಸಾವಿರ ರೂ.ಸಹಾಯ ಧನ ನೀಡುವ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಆಟೋ ಚಲಾಯಿಸಿಕೊಂಡು ಬರುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಟೋ ಚಾಲಕರಿಗೆ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಶಾಸಕತು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಆಟೋ ಚಾಲಕರ ಸಂಕಷ್ಟದ ಬಗ್ಗೆ ನನಗೆ ಅರಿವಿದೆ. ನಾನೂ ಸಹ ಆಟೋ ಚಾಲಕನಾಗಿ ಕಷ್ಟ ಪಟ್ಟಿದ್ದೇನೆ. ಚಿಕ್ಕಬಳ್ಳಾಪುರದ ಮಂಡಿಯಲ್ಲಿ ಮೂಟೆ ಹೊತ್ತಿದ್ದೇನೆ. ಕೇವಲ ಐವತ್ತು ರೂಪಾಯಿಗಾಗಿ ಆಟೋ ಓಡಿಸುವ ಕೆಲಸವನ್ನು ಕೂಡ ಮಾಡಿದ್ದೇನೆ ಎಂದು ಹೇಳಿದ್ದಾರೆ.