ಯುವಕನಿಗಾಗಿ ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಇಬ್ಬರು ಅಪ್ರಾಪ್ತ ಬಾಲಕಿಯರು;ಯುವಕ ತಪ್ಪಿಸಿಕೊಂಡು ಪರಾರಿ
ಔರಂಗಾಬಾದ್:ಮಹಾರಾಷ್ಟ್ರದ ಪೈಥಾನ್ ಜಿಲ್ಲೆಯಲ್ಲಿ 17 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರು ಸಾರ್ವಜನಿಕವಾಗಿ ಯುವಕನಿಗಾಗಿ ಜಗಳವಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗ್ಗೆ ಪೈಥಾನ್ ನ ಜನನಿಬಿಡ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಲಕಿಯರಲ್ಲಿ ಒಬ್ಬಳು ಯುವಕನೊಂದಿಗೆ ಬಸ್ ನಿಲ್ದಾಣಕ್ಕೆ ತೆರಳಿದ್ದಳು ಮತ್ತು ಇನ್ನೊಬ್ಬ ಬಾಲಕಿಗೆ ಈ ವಿಷಯ ತಿಳಿದಿದ್ದು,ಇಬ್ಬರನ್ನು ಹಿಂಬಾಲಿಸಿಕೊಂಡು ಸ್ಥಳಕ್ಕೆ ಬಂದಿದ್ದಾಳೆ.
ಬಳಿಕ ಬಾಲಕಿಯರ ನಡುವೆ ವಾಗ್ವಾದ ನಡೆದಿದ್ದು, ಅದು ಜಗಳಕ್ಕೆ ತಿರುಗಿದೆ.ಯುವಕ ಹೊಡೆದಾಟದ ಸಮಯದಲ್ಲಿ ಸ್ಥಳದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬಾಲಕಿಯರನ್ನು ಅಂತಿಮವಾಗಿ ಪೊಲೀಸ್ ಠಾಣೆಗೆ ಕರೆದೊಯ್ದು ಕೌನ್ಸೆಲಿಂಗ್ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.