ಬೆಂಗಳೂರು; ಕಾಲೇಜೊಂದರ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತ್ಯು

-ಇಮ್ರಾನ್ ಖಾನ್, ರಾಧಿಕಾ ಮತ್ತು ಪೂಜಾ ಮೃತರು.

ಚಿಕ್ಕಬಳ್ಳಾಪುರ;ಬೆಂಗಳೂರಿನ‌ ಮೂವರು ವಿದ್ಯಾರ್ಥಿಗಳು
ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ದುರಂತ ಘಟನೆ ನಡೆದಿದೆ.

ಇಮ್ರಾನ್ ಖಾನ್ (20), ರಾಧಿಕಾ(19) ಮತ್ತು ಪೂಜಾ(19)ಮೃತರು.

ಬೆಂಗಳೂರಿನ ಕಾಲೇಜೊಂದರಲ್ಲಿ ಡಿ-ಫಾರ್ಮ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯಕ್ಕೆ ತೆರಳಿದ್ದು ಮೂವರು ಈಜಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಶ್ರೀನಿವಾಸ ಸಾಗರ ಜಲಾಶಯಕ್ಕೆ ಆರು ಜನರ ತಂಡ ಆಗಮಿಸಿತ್ತು.

ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನೊಂದಿಗೆ ಶೋಧಕಾರ್ಯ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರ್ ಪತ್ನಿಗೆ ನಾನು ಕೆಲಸ ಕೊಡುತ್ತೇನೆ, ನಳಿನ್ ಕುಮಾರ್ ರಾಜೀನಾಮೆ ಕೊಡಲಿ- ಪ್ರತಿಭಾ ಕುಳಾಯಿ ಏನೆಲ್ಲಾ ಹೇಳಿದ್ರು?

ಮಂಗಳೂರು:ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ವಾಗ್ದಾಳಿ ನಡೆಸಿದ್ದಾರೆ.

Developed by eAppsi.com