ಹೊಸದಿಲ್ಲಿ:ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ಮುಕ್ತಾಯಗೊಳಿಸಿದೆ.
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ,ದಿ.ಕಲ್ಯಾಣ್ ಸಿಂಗ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್ ಕೈಬಿಟ್ಟಿರುವುದಾಗಿ ತಿಳಿಸಿದೆ.
ನ್ಯಾಯಾಂಗ ನಿಂದನೆ ಅರ್ಜಿಯನ್ನು ಮೊದಲೇ ಪಟ್ಟಿ ಮಾಡಬೇಕಿತ್ತು, ಆದರೆ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಅಯೋಧ್ಯೆ ಭೂ ವಿವಾದವನ್ನು ನಿರ್ಧರಿಸುವ ನವೆಂಬರ್ 9, 2019 ರ ತೀರ್ಪಿನೊಂದಿಗೆ ಈ ಸಮಸ್ಯೆ ಮುಕ್ತಾಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಉತ್ತರಪ್ರದೇಶ ಸರ್ಕಾರವು ರಥಯಾತ್ರೆಗೆ ಅವಕಾಶ ನೀಡಿದ್ದು, ಇದರ ಪರಿಣಾಮ ಬಾಬ್ರಿ ಮಸೀದಿ ಧ್ವಂಸಗೊಳ್ಳಲು ಕಾರಣವಾಗಿತ್ತು.ಈ ಹಿನ್ನೆಲೆಯಲ್ಲಿ ಸಿಎಂ ಆಗಿದ್ದ ಕಲ್ಯಾಣ್ ಸಿಂಗ್ ಮತ್ತು ಇತರರ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು.
ಅಯೋಧ್ಯೆ ವಿವಾದದ ಅಂತಿಮ ತೀರ್ಪನ್ನು 9 ನವೆಂಬರ್ 2019 ರಂದು ಭಾರತದ ಸರ್ವೋಚ್ಚ ನ್ಯಾಯಾಲಯವು ನೀಡಿತ್ತು.